• Home  
  •      ಉಡುಪಿ ಉಚ್ಚಿಲ ದಸರಾ 2026 :  ವಿದ್ಯುದ್ದೀಪಾಲಂಕಾರ ಉದ್ಘಾಟಿಸಿದ ನಾಡೋಜಾ ಡಾ. ಜಿ. ಶಂಕರ್‌ (Udupi Uchila Dasara 2026: Vidyuddipalamankara inaugurated by Nadoja Dr. G. Shankar)
- ಧಾರ್ಮಿಕ - ಸಾಂಸ್ಕೃತಿಕ - ಸೌಹಾರ್ಧ

     ಉಡುಪಿ ಉಚ್ಚಿಲ ದಸರಾ 2026 :  ವಿದ್ಯುದ್ದೀಪಾಲಂಕಾರ ಉದ್ಘಾಟಿಸಿದ ನಾಡೋಜಾ ಡಾ. ಜಿ. ಶಂಕರ್‌ (Udupi Uchila Dasara 2026: Vidyuddipalamankara inaugurated by Nadoja Dr. G. Shankar)

Share: ಉಡುಪಿ ಉಚ್ಚಿಲ ದಸರಾ 2026 :  ವಿದ್ಯುದ್ದೀಪಾಲಂಕಾರ ಉದ್ಘಾಟಿಸಿದ ನಾಡೋಜಾ ಡಾ. ಜಿ. ಶಂಕರ್‌ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದವರೆಗೆ ಕಣ್ಮನ  ಸೆಳೆವ ದೀಪಾಲಂಕಾರ PHOTO CREDIT : SACHIN UCHILA  (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉತ್ಸವದ ಅಂಗವಾಗಿ ಮಾಡಲಾದ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ರೂವಾರಿ, ದಕ್ಷಿಣ ಕನ್ನಡ ಮೊಗವೀರ […]

 (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉತ್ಸವದ ಅಂಗವಾಗಿ ಮಾಡಲಾದ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ರೂವಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌ ಶನಿವಾರ ಸಂಜೆ ಉದ್ಘಾಟಿಸಿದರು.

 ಉದ್ಘಾಟನೆಯ ಪೂರ್ವಭಾವಿಯಾಗಿ ಪೂಜಾ ವಿಧಿಯನ್ನು ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಶ್ರೀನಿವಾಸ ಉಪಾಧ್ಯಾಯ ನೆರವೇರಿಸಿದರು.

ವಿದ್ಯುತ್‌ ದೀಪಾಲಂಕಾರದ ಗುತ್ತಿಗೆದಾರ ಅನಿಲ್‌ ರವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

  ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ ಸಹಕಾರ ಮತ್ತು ಸಹಯೋಗದಲ್ಲಿ ಈ ಬಾರಿಯ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪರಿಸರದಿಂದ ಪಡುಬಿದ್ರಿ ಮೂಲಕ ಕಾಪು ಸಮುದ್ರ ತೀರದವರೆಗೆ ನಿರ್ಮಿಸಲಾಗಿರುವ ಅತ್ಯಾಕರ್ಷಕ ವಿದ್ಯುದ್ದೀಪಾಲಂಕಾರವು ಸಾರ್ವಜನಿಕರ ಗಮನ ಸೆಳೆಯುತ್ತಿದ್ದು, ದಸರಾ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಿದೆ.

  ಉದ್ಘಾಟನಾ ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ-ಉಚ್ಚಿಲ ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮೋಹನ್ ಬೇಂಗ್ರೆ, ಶ್ರೀಪತಿ ಭಟ್‌ ಉಚ್ಚಿಲ, ದಿನೇಶ್‌ ಎರ್ಮಾಳು, ಮನೋಜ್ ಕಾಂಚನ್, ಸತೀಶ್ ಕುಂದರ್ ಮಲ್ಪೆ, ವಾಸುದೇವ ಸಾಲ್ಯಾನ್‌, ಗುಂಡು ಬಿ ಅಮೀನ್‌,  ರತ್ನಾಕರ ಸಾಲ್ಯಾನ್ ಮಲ್ಪೆ, ವಿಶ್ವಾಸ್‌ ಅಮೀನ್‌,  ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.