ಉಡುಪಿ: ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi-Chikkamagaluru Congress candidate K. Jayaprakash Hegde nomination papers)
ಉಡುಪಿ: ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ
(Udupi)ಉಡುಪಿ: ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ ಹೆಗ್ಡೆ (K. Jayaprakash Hegde) ಅವರು ಇಂದು ನಾಮಪತ್ರ ಸಲ್ಲಿಸಿದರು.
ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಹಾಗೂ ಪ್ರಮುಖರ ಸಭೆ ನಡೆಯಿತು. ಬಳಿಕ ಪಕ್ಷದ ಪ್ರಮುಖರೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ (EX Minister Vnaykumar Sorake), ಮಾಜಿ ಸಚಿವ ಕೆ.ಜೆ. ಜಾರ್ಜ್(EX Minister KJ George), ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರು, ಉಭಯ ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಜರಿದ್ದರು.