• Home  
  • ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi: We will all three seats in the by – election : BJP  State president B Y Vijayendra)
- ರಾಜಕೀಯ

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi: We will all three seats in the by – election : BJP  State president B Y Vijayendra)

Share: ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi) ಉಡುಪಿ: ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ ಕೊಡುತ್ತೇವೆ. ನಾಳೆ ಅಥವಾ ನಾಡಿದ್ದು ಅಂತಿಮ ತೀರ್ಮಾನ ಆಗುತ್ತೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿ ಎಂದು ಬಿಜೆಪಿ […]

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

(Udupi) ಉಡುಪಿ: ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ ಕೊಡುತ್ತೇವೆ. ನಾಳೆ ಅಥವಾ ನಾಡಿದ್ದು ಅಂತಿಮ ತೀರ್ಮಾನ ಆಗುತ್ತೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

 ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಎನ್ ಡಿ ಎ ಗೆಲ್ಲಿಸಬೇಕು. ಇದು ನಮ್ಮ ಗುರಿ. ನಮ್ಮಕಾರ್ಯಕರ್ತರು ಸಜ್ಜಾಗಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡಿದ್ದೇವೆ. ಅಭಿವೃದ್ಧಿ ಶೂನ್ಯ ಸರಕಾರದ ವಿರುದ್ಧ ಜನ ಆಕ್ರೋಶಿತರಾಗಿದ್ದಾರೆ. ಇದರ ಪರಿಣಾಮ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈಗಾಗಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ರೇಸ್ ನಲ್ಲಿ ಇರುವವರ ಪಟ್ಟಿ ದೊಡ್ಡದಿದೆ. ಸದ್ಯದಲ್ಲೇ ಯಾರ್ಯಾರು ಇದ್ದಾರೆ ಅನ್ನೋದು ಬಹಿರಂಗವಾಗಲಿದೆ.

ಭ್ರಷ್ಟಾಚಾರದ ಸುಳಿಯಲ್ಲಿ ಸಿಕ್ಕ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾದ ಸಂದರ್ಭ ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಗಲು ಅನೇಕ ಹಿರಿಯರು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡುವುದನ್ನೇ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.