ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ
(Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ ಬೆಲೆ ತಿಳಿಯುತ್ತದೆ. ಇಂದಿರಾ ಕ್ಯಾಂಟೀನ್ ಮುಖ್ಯ ಮಂತ್ರಿಯವರ ಕನಸಿನ ಕೂಸಾಗಿದ್ದು,ಕರ್ನಾಟಕದಲ್ಲಿ ಯಾರೂ ಹಸಿವಿನಿಂದ ಇರಬಾರದು. ಹಸಿವು ಮುಕ್ತ ಕರ್ನಾಟಕ ಆಗಬೇಕೆನ್ನುವುದೇ ಮುಖ್ಯಮಂತ್ರಿಗಳ ಮಹದಾಸೆ ಎಂದರು.
ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್, ಕಾಪು ಪುರಸಭಾಧಿಕಾರಿ ನಾಗರಾಜ್, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಪುರಸಭಾ ಸದಸ್ಯರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಎಂ.ಎ. ಗಫೂರ್, ಕಾಪು ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

