• Home  
  • ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ (‘Pradeepta 2025-26’ inaugurated at MGM College Udupi)
- ಶಾಲಾ ಕಾಲೇಜು

ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ (‘Pradeepta 2025-26’ inaugurated at MGM College Udupi)

Share: ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ (Udupi) ಉಡುಪಿ: ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆಸುವ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ‘ಪ್ರದೀಪ್ತ 2025-26’ ವನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ದೀಪ ಬೆಳಗಿಸಿ, ಲೋಗೋ ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು.      ಉಪ ಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ […]

(Udupi) ಉಡುಪಿ: ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆಸುವ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ‘ಪ್ರದೀಪ್ತ 2025-26’ ವನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ದೀಪ ಬೆಳಗಿಸಿ, ಲೋಗೋ ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು.

     ಉಪ ಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ ಎಂದು ತಿಳಿಸಿದರು.

    ಐಕ್ಯೂಎಸಿ ಸಂಯೋಜಕಿ ಪ್ರೊ. ಶೈಲಜಾ ಎಚ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ವೀರ ಐಡಾ ಪಿಂಟೊ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥೆ ಡಾ. ರೇಖಾ ಎನ್ ಚಂದ್ರ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ಸಂಯೋಜಕಿ ಪ್ರೊ. ಪವಿತ್ರಾ ಕೆ, ಪ್ರದೀಪ್ತ ಕಾರ್ಯಕ್ರಮಗಳ ಒಳನೋಟಗಳನ್ನು ನೀಡಿದರು. ವಿದ್ಯಾರ್ಥಿ ಸಂಯೋಜಕರಾದ ಕಾರ್ತಿಕ್ ರಾವ್, ವಿದ್ಯಾರ್ಥಿಗಳಾದ ಸ್ವರ್ಣ, ಪ್ರಜ್ವಲ್, ವೈಷ್ಣವಿ ಮತ್ತು ಐಶ್ವರ್ಯ ಕಾರ್ಯಕ್ರಮ ನಿರ್ವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.