ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್
ವಿಡಿಯೋ ವೈರಲ್ , ಪ್ರಕರಣ ತಡವಾಗಿ ಬೆಳಕಿಗೆ
ಉಡುಪಿ: ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅದರ ವಿಡಿಯೋ ವೈರಲ್ ಆಗುತ್ತಿದೆ.
ಮೇ 18ರಂದು ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ.
ಅಡ್ಡಾದಿಡ್ಡಿ ಕಾರು ಚಲಾಯಿಸಿ ಎರಡೂ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಬಳಿಕ ಎರಡು ತಂಡಗಳ ನಡುವೆ ಫೈಟ್ ನಡೆದಿದೆ. ಈ ವೇಳೆ ನಡುರಸ್ತೆಯಲ್ಲೇ ತಂಡವೊಂದು ತಲವಾರು ಹಿಡಿದು ಹೊಡೆದಾಟ ನಡೆಸಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸಾಕ್ ಮತ್ತು ಇತರರು ಆರೋಪಿಗಳು.ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ತಲವಾರ್‌ನ್ನು ಇರಿಸಿ ಉಡುಪಿಯಲ್ಲಿ ಕಳ್ಳತನ ಮಾಡಲು ಪ್ರಯತ್ನಿಸಿರುವುದಾಗಿಯೂ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಶಿಕ್ ಮತ್ತು ರಕೀಬ್ ಎಂಬಿಬ್ಬರು ಆರೋಪಿಗಳ ಬಂಧನವಾಗಿದ್ದು, ಇವರಿಬ್ಬರು ಗರುಡ ಗ್ಯಾಂಗ್ ನವರು ಎಂದು ಎಸ್ಪಿ ತಿಳಿಸಿದ್ದಾರೆ. ಎರಡು ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ತಲವಾರು, ಒಂದು ಡ್ರ್ಯಾಗರ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
