• Home  
  • ಉಡುಪಿ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ – ನಟ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ (Udupi: Karave protests against actor Kamal Haasan for controversial statement about Kannada language)
- ರಾಜಕೀಯ

ಉಡುಪಿ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ – ನಟ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ (Udupi: Karave protests against actor Kamal Haasan for controversial statement about Kannada language)

Share: ಉಡುಪಿ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ – ನಟ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ (Udupi) ಉಡುಪಿ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.   ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ. ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.  ನಗರದ […]

(Udupi) ಉಡುಪಿ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

  ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ. ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

 ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿದರು. ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರು ನಟಿಸಿರುವ “ಥಗ್ ಲೈಫ್” ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

 ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದು, ಇದು ಅತ್ಯಂತ ಖಂಡನೀಯ. ಈ ಆಧಾರರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೆ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಜೂನ್ 5ರಂದು ಬಿಡುಗಡೆ ಸಿದ್ದವಾಗಿರುವ ಅವರ “ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.