# Tags
#ಅಪಘಾತ

ಉಡುಪಿ : ಕಾರು ಪಲ್ಟಿ, ಹಿರಿಯ ನಾಗರಿಕರಿಗೆ ಗಾಯ (Udupi accident)

(Udupi)ಉಡುಪಿ: ಕಾರು ಪಲ್ಟಿಯಾಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಕೆ ಎ 19 ನೋಂದಣಿಯ ಸ್ವಿಫ್ಟ್ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಕಡಿಯಾಳಿ ಬಳಿ ಅತೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ದಿಢೀರ್ ಬ್ರೇಕ್ ಹಾಕಿದ್ದರಿಂದ ಸ್ವಿಫ್ಟ್ ಕಾರು ಪಲ್ಟಿಯಾಗಿದೆ.

ಈ ವೇಳೆ ರಸ್ತೆ ಬದಿ ತಮ್ಮ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ವೃದ್ದರಿಗೆ ಮತ್ತು ಮತ್ತೊಂದು ಕಾರಿಗೆ ಶಿಫ್ಟ್ ಕಾರು ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2