ಉಡುಪಿ : ಕಿನ್ನಿಮೂಲ್ಕಿ ರಾಹೆ 66ರಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್ – ಸ್ಥಳೀಯರಲ್ಲಿ ಆತಂಕ
(Udupi) ಉಡುಪಿ: ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳ್ಳಂಬೆಳಿಗ್ಗೆ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಮುಗುಚಿ ಬಿದ್ದು, ಅನಿಲ ಸೋರಿಕೆ ಉಂಟಾಗಿ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಉಡುಪಿ ಜಿಲ್ಲಾ ಪೋಲಿಸರು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

