• Home  
  • ಉಡುಪಿ: ಪೊಲೀಸರಿಂದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು, ಆಸ್ಪತ್ರೆಗೆ ದಾಖಲು (Udupi: Garuda gang member Isak shot in the leg by police, admitted to hospital)
- ಅಪರಾಧ - ವಿಡಿಯೋ

ಉಡುಪಿ: ಪೊಲೀಸರಿಂದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು, ಆಸ್ಪತ್ರೆಗೆ ದಾಖಲು (Udupi: Garuda gang member Isak shot in the leg by police, admitted to hospital)

Share: ಉಡುಪಿ: ಪೊಲೀಸರಿಂದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು, ಆಸ್ಪತ್ರೆಗೆ ದಾಖಲು (Udupi) ಉಡುಪಿ: ಉಡುಪಿ ಜಿಲ್ಲೆಯ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಇಸಾಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟಿಸಿದೆ. ‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಠಾಣಾಧಿಕಾರಿ ದೇವರಾಜ್ ಮತ್ತು ಅವರ ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಶುಟ್‌ ಔಟ್‌ ಮಾಡಿದ್ದಾರೆ ಎಂದು ಮಾಹಿತಿ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. […]

ಉಡುಪಿ: ಪೊಲೀಸರಿಂದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು, ಆಸ್ಪತ್ರೆಗೆ ದಾಖಲು

(Udupi) ಉಡುಪಿ: ಉಡುಪಿ ಜಿಲ್ಲೆಯ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಇಸಾಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟಿಸಿದೆ. ‌

ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಠಾಣಾಧಿಕಾರಿ ದೇವರಾಜ್ ಮತ್ತು ಅವರ ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಶುಟ್‌ ಔಟ್‌ ಮಾಡಿದ್ದಾರೆ ಎಂದು ಮಾಹಿತಿ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

 ಗುಂಡಿನಿಂದ ಗಾಯಗೊಂಡ ಇಸಾಕ್‌ನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ‌.  

 ಘಟನೆ ವಿವರ: ಮಣಿಪಾಲ ಠಾಣಾ ಅಪರಾಧ ಕ್ರಮಾಂಕ 35/25 ರಲ್ಲಿ ಆರೋಪಿ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ ಮತ್ತು  ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು. ಈ ತಂಡವು ಆರೋಪಿಗಳ ಜಾಡನ್ನು ಹಿಡಿದು, ಬುಧವಾರ ಮಧ್ಯಾಹ್ನ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಇಸಾಕ್ ಸೇರಿದಂತೆ ಒಟ್ಟು ನಾಲ್ಕು ಜನರನ್ನು ದಸ್ತಗಿರಿ ಮಾಡಲಾಗಿದೆ.

 ಈ ಎಲ್ಲಾ ನಾಲ್ಕು ಆರೋಪಿಗಳನ್ನು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಣಿಪಾಲಕ್ಕೆ ಕರೆತರುವಾಗ, ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ, ಸುಮಾರು ಸಂಜೆ 7.15ಕ್ಕೆ ಆರೋಪಿ ಇಸಾಕ್‌ ತನಗೆ ತುರ್ತಾಗಿ ವಾಂತಿ ಹಾಗೂ ಮೂತ್ರ ವಿಸರ್ಜನೆ ಮಾಡಲೇಬೇಕೆಂದು ಹಠ ಮಾಡಿ, ಕರೆತರುತ್ತಿದ್ದ ವಾಹನವನ್ನು ನಿಲ್ಲಿಸಿದ್ದ. ಮೂತ್ರ ವಿಸರ್ಜನೆ ನಂತರ ಏಕಾಏಕಿ ಈತನೊಂದಿಗೆ ಇದ್ದ ಉಡುಪಿ ಪೊಲೀಸ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯವರನ್ನ ತಳ್ಳಿ ಅವರ ಮೇಲೆ, ಆತನ ಕೈಗೆ ಅಳವಡಿಸಲಾಗಿದ್ದ ಲೀಡಿಂಗ್ ಚೈನ್ ಅನ್ನು ಬಳಸಿ ಬಲವಾಗಿ ಸುತ್ತಿ ದೂಡಿದ್ದಾನೆ. ಇಬ್ಬರು ಪೊಲೀಸ್ ಉಪನಿರೀಕ್ಷಕರುಗಳು ಆರೋಪಿಯನ್ನು ಹಿಡಿಯಲು ಪ್ರಯತ್ನಿಸಿದಾಗ ಅವರಿಗೆ ಬಲವಾಗಿ ಒದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸಿನೆ. ಹೀಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಆತನ ಲೀಡಿಂಗ್ ಚೈನ್ ಹಾಕಿ ಕರೆ ತರುತ್ತಿದ್ದ ವಾಹನದ ಎದುರಿನ ಗ್ಲಾಸಿಗೆ ಬಡಿದು, ಗ್ಲಾಸ್ ಒಡೆದು ಅಧಿಕಾರಿ ಹಾಗೆ ಸಿಬ್ಬಂದಿಗಳಿಗೆ ಗಾಯಗಳಾಗಿದೆ.

 ನಂತರದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್ ಅವರು ಎಚ್ಚರಿಕೆ ನೀಡಿದ್ದರೂ,  ಕೇಳದೇ ಇದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಕೂಡ ಇಸಾಕ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಆರೋಪಿ ಇಸಾಕ್ ಹಾಗೂ ಗಾಯಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

 

Leave a comment

Your email address will not be published. Required fields are marked *

eMedia Kannada  @2025. All Rights Reserved.