ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ (Udupi : Special postal envelope relesed on the occasion of Geetha Jayanthi)
ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ
(Udupi) ಉಡುಪಿ: ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ, ಕರ್ನಾಟಕ ವೃತ್ತದ ಮುಖ್ಯ ಪೊಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರಕುಮಾರ್ ಇವರು ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು.
ಪರ್ಯಾಯ ಪುತ್ತಿಗೆ ಶ್ರೀಗಳಾದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಕಿರಿಯ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ ನಿತೀಶ್ ಭಾರದ್ವಾಜ್, ನಿರೂಪಕ ಮಾಸ್ಟರ್ ಆನಂದ್, ಮತ್ತು ಶತಾವಧಾನಿ ಡಾ. ರಾಮನಾಥ ಆಚಾರ್ಯ ಉಪಸ್ಥಿತರಿದ್ದರು.
ಈ ಸಂದರ್ಭ ದಲ್ಲಿ ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞದ ಸಮನ್ವಯಾಧಿಕಾರಿ ಅನಂತ ಕೃಷ್ಣ ಪ್ರಸಾದ್ ಉಪಸ್ಥಿತರಿದ್ದರು.