• Home  
  • ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಚಾಲನೆ (Udupi Grameen Bantara Charitable Trust launches free computer training)
- ಸಂಘ, ಸಂಸ್ಥೆಗಳು

ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಚಾಲನೆ (Udupi Grameen Bantara Charitable Trust launches free computer training)

Share: ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಚಾಲನೆ ಮಣಿಪುರ, ಕುಂತಳನಗರ, ಎ.2: ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನಲ್ಲಿ ಅಲ್ ಕಾರ್ಗೋ ಲಾಜಿಸ್ಟಿಕ್ ಕಂಪೆನಿ ಮಂಗಳೂರು ಪ್ರಾಯೋಜಕತ್ವದಲ್ಲಿ  ಉಡುಪಿಯ ಮೈಸ್ ಕಂಪ್ಯೂರ್‌ ಸಹಯೋಗದಲ್ಲಿ ಒಂದು ತಿಂಗಳ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 19ನೇ ಬ್ಯಾಚ್‌ನ್ನು ಮಂಗಳವಾರ ಕಾಪು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿ ಸಿಲ್ವ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, […]

ಮಣಿಪುರ, ಕುಂತಳನಗರ, ಎ.2: ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನಲ್ಲಿ ಅಲ್ ಕಾರ್ಗೋ ಲಾಜಿಸ್ಟಿಕ್ ಕಂಪೆನಿ ಮಂಗಳೂರು ಪ್ರಾಯೋಜಕತ್ವದಲ್ಲಿ  ಉಡುಪಿಯ ಮೈಸ್ ಕಂಪ್ಯೂರ್‌ ಸಹಯೋಗದಲ್ಲಿ ಒಂದು ತಿಂಗಳ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 19ನೇ ಬ್ಯಾಚ್‌ನ್ನು ಮಂಗಳವಾರ ಕಾಪು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿ ಸಿಲ್ವ ಉದ್ಘಾಟಿಸಿದರು.

ಅವರು ಈ ಸಂದರ್ಭ ಮಾತನಾಡಿ, ಶಿಕ್ಷಣದಲ್ಲಿ ಶ್ರದ್ಧೆಯಿಂದ ನಿರಂತರತೆ, ಹೊಸತನವನ್ನು ಕಾಣುವ ಮೂಲಕ ಸವಾಲುಗಳನ್ನು ಮೆಟ್ಟಿ ನಿಂತು ರಾಜ್ಯ, ಕೇಂದ್ರ ಸರಕಾರದ ಉದ್ಯೋಗಾವಕಾಶದ ಸದ್ಬಳಕೆ, ಸ್ವ – ಉದ್ಯೋಗ ಅಥವಾ ಉದ್ಯೋಗಿಗಳಾಗಿ ನಿಮ್ಮ ಕಲ್ಪನೆಯ ಸುಂದರ ಬದುಕನ್ನು ಕಟ್ಟಿಕೊಳ್ಳಿರಿ ಎಂದು ಕರೆ ನೀಡಿದರು.

  ಮೂಡುಬೆಳ್ಳೆ ಜ್ಞಾನಗಂಗಾ ಪಿ.ಯು. ಕಾಲೇಜು ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ರಾವ್ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು, ಯುವಜನತೆಯ ಉತ್ತಮ ಭವಿಷ್ಯದ ದೃಷ್ಟಿಕೋನದಲ್ಲಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ನಡೆಸುವ ಚಟುವಟಿಕೆಯು ಉಪಯುಕ್ತವಾಗಿದ್ದು, ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳೆಯರು, ಯುವಜನತೆಯ ಸಬಲೀಕರಣಕ್ಕಾಗಿ ಕೌಶಲ್ಯಅಭಿವೃದ್ಧಿ, ತಾಂತ್ರಿಕ ಜ್ಞಾನ ಹಾಗೂ ಉದ್ಯೋಗ ಮೇಳದ ಮೂಲಕ ಚಾರಿಟೆಬಲ್ ಟ್ರಸ್ಟ್ ನಿರಂತರತೆಯನ್ನು ಕಾಯ್ದುಕೊಂಡಿದೆ. ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಉದ್ಯೋಗ ಮೇಳ ನಡೆಸಲಾಗುತ್ತದೆ. ಎರಡು ಬಾರಿಯ ಉದ್ಯೋಗ ಮೇಳದಲ್ಲಿ ಒಟ್ಟು 2100 ಯುವಕ, ಯುವತಿಯರು ಉದ್ಯೋಗ ಪಡೆದಿದ್ದಾರೆ ಎಂದರು.  

ವೇದಿಕೆಯಲ್ಲಿ ಬಹರೈನ್ ಕನ್ನಡ ಸಂಘ ಮತ್ತು ಬಂಟರ ಸಂಘದ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಮೈಸ್ ಉಪಪ್ರಾಂಶುಪಾಲ ಶ್ರೀಕಾಂತ್, ಮೂಡುಬೆಳ್ಳೆ ಜ್ಞಾನಗಂಗಾ ಪಿ.ಯು. ಕಾಲೇಜು ಉಪಪ್ರಾಂಶುಪಾಲೆ ಡಾ. ಲೀನಾ ನಾಯಕ್, ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ, ಕಾರ್ಯಕ್ರಮ ಸಂಯೋಜಕ ವಿಜಿತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಪದ್ಮನಾಭ ಹೆಗ್ಡೆ, ಟ್ರಸ್ಟಿಗಳಾದ ರಮೇಶ್ ಶೆಟ್ಟಿ ನಿಂಜೂರು, ರಂಜಿನಿ ಹೆಗ್ಡೆ ಬೆಳ್ಳೆ, ದಿವಾಕರ ಶೆಟ್ಟಿ, ಅಶೋಕ್ ಶೆಟ್ಟಿ ಕೆಮ್ತೂರು, ಭಾಸ್ಕರ್ ಶೆಟ್ಟಿ, ಕಂಪ್ಯೂಟರ್ ತರಬೇತುದಾರ ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.