• Home  
  • ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Disribution of Computer training and certificate to Students at Udupi Grameena Bantara sangha)
- social service - ವಿಡಿಯೋ

ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Disribution of Computer training and certificate to Students at Udupi Grameena Bantara sangha)

Share: ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಸ್ಟಿಕ್ ಕಂಪನಿ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ನಲ್ಲಿ ನಡೆಯುತ್ತಿರುವ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15ನೇ ತಂಡದ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16ನೇ ತಂಡದ ಪ್ರಾರಂಭ ಕಾರ್ಯಕ್ರಮವನ್ನು ಬಡಗುಬೆಟ್ಟು ಕೆಡಿಟ್ ಕೋ.ಆ. ಸೊಸೈಟಿಯ ಅಧ್ಯಕ್ಷ  ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. […]

ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ

(Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಸ್ಟಿಕ್ ಕಂಪನಿ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ನಲ್ಲಿ ನಡೆಯುತ್ತಿರುವ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15ನೇ ತಂಡದ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16ನೇ ತಂಡದ ಪ್ರಾರಂಭ ಕಾರ್ಯಕ್ರಮವನ್ನು ಬಡಗುಬೆಟ್ಟು ಕೆಡಿಟ್ ಕೋ.ಆ. ಸೊಸೈಟಿಯ ಅಧ್ಯಕ್ಷ  ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು.

ಅವರು ಈ ಸಂದರ್ಭ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತ್ತು ತಾಂತ್ರಿಕ ಜ್ಞಾನ ಪಡೆದುಕೊಂಡು ಕ್ಷಮತೆಯನ್ನು ಹೊಂದುವುದು ಯಶಸ್ಸಿಗೆ ಅತ್ಯಗತ್ಯವಾಗಿದೆ ಎಂದರು

 ಮುಖ್ಯ ಅತಿಥಿಯಾಗಿದ್ದ ಉದ್ಯಮಿ, ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿ, ಪ್ರತಿಯೋರ್ವನಿಗೆ ಉತ್ತಮ ಅವಕಾಶ ಸಿಕ್ಕಿಯೇ ಸಿಗುತ್ತದೆ. ಅದನ್ನು ಉಪಯೋಗಿಸಿಕೊಂಡರೆ ಜಿವನ ಸುಭದ್ರ ಎಂದರು.

  ಪ್ರಾಸ್ತಾವಿಕ ಮಾತುಗಳನ್ನಾಡಿದ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಈವರೆಗೆ ಶಿಬಿರದಲ್ಲಿ 320ವಿದ್ಯಾರ್ಥಿಗಳು ಉಚಿತ ಕಂಪ್ಯೂಟರ್ ತರಬೇತಿ ಪಡೆದುಕೊಂಡಿದ್ದಾರೆ. ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ 1800 ವಿದ್ಯಾರ್ಥಿಗಳು, 300 ಮಹಿಳೆಯರು ಭಾಗವಹಿಸಿದ್ದಾರೆ. ಎರಡು ಬಾರಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಶೆಟ್ಟಿ, ಮೂಡುಬೆಳ್ಳೆ ಜ್ಞಾನಗಂಗಾ ಪಿಯು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ರಾವ್, ಉಪ ಪ್ರಾಂಶುಪಾಲೆ ಡಾ. ಲೀನಾ ನಾಯ್ಕ್, ಆಲ್ ಕಾರ್ಗೋ ಲಾಜಸ್ಟಿಕ್ ಕಂಪನಿ ಮಂಗಳೂರು ಇದರ ಸಿಎಸ್‌ಆರ್ ಎಕ್ಸಿಕ್ಯೂಟೀವ್ ಸವಿಸ್ತಾರ್ ಆಳ್ವ, ಮೈಸ್ ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ರವಿ ಕೋಟ್ಯಾನ್, ಕಾರ್ಯಕ್ರಮ ನಿರ್ದೇಶಕ ಪದ್ಮನಾಭ ಹೆಗಡೆ, ಸಂಘದ ನಿರ್ದೇಶಕರುಗಳಾದ ಜಗದೀಶ್ ಹೆಗ್ಡೆ, ದಯಾನಂದ ಶೆಟ್ಟಿ ಕಲ್ಮಂಜೆ, ರಮೇಶ್ ಶೆಟ್ಟಿ ನಿಂಜೂರು, ಗೋಪಾಲ ಶೆಟ್ಟಿ, ದಿವಾಕರ ಶೆಟ್ಟಿ ಮಣಿಪುರ ವಿರೇಂದ್ರ ಹೆಗ್ಡೆ ಪಳ್ಳಿ, ಹರೀಂದ್ರ ಹೆಗ್ಡೆ, ಅಶೋಕ್ ಶೆಟ್ಟಿ ಕೆಮ್ತೂರು, ಕಂಪ್ಯೂಟರ್ ತರಬೇತುದಾರ ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಸ್ಟಿಸ್ ಕೆ.ಎಸ್. ಹೆಗ್ಡೆ ಮೆನೇಜ್‌ಮೆಂಟ್ ಕಾಲೇಜಿನ ಪ್ರೊ. ಸುಧೀರ್ ರಾಜ್ ಕಾರ್ಯಕ್ರಮ ನಿರೂಪಿಸಿದರು.

ಕೋಶಾಧಿಕಾರಿ ಹಾಗೂ ಕಾರ್ಯಕ್ರಮ ನಿರ್ದೇಶಕ ವಿಜಿತ್ ಶೆಟ್ಟಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.