ಉಡುಪಿ; ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ
(Udupi)ಉಡುಪಿ: ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣಾ ಗೆಲುವು ನಿಶ್ಚಿತವಾಗಿದ್ದು, ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Late State BJP President Nalin Kumar Kateelu)ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.
ಲೋಕಸಭಾ ಚುನಾವಣೆಯ ಬಳಿಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ, ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯ ಉತ್ತಮ ಫಲಿತಾಂಶ ಮುoದಿನ ಚುನಾವಣೆಗಳಿಗೆ ಸ್ಫೂರ್ತಿ ತುಂಬಲಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು, ಅನನ್ಯ ಜವಾಬ್ದಾರಿಗಳನ್ನು ಹೊಂದಿರುವ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉತ್ತಮ ಪೂರ್ವ ತಯಾರಿಯೊಂದಿಗೆ ಬದ್ಧತೆಯಿಂದ ತೊಡಗಿಸಿಕೊಂಡು ಲೋಕಸಭಾ ಚುನಾವಣೆಯನ್ನು ಎಚ್ಚರಿಕೆಯಿಂದ ಎದುರಿಸಬೇಕಾಗಿದೆ.
ಪ್ರಧಾನಿ ಮೋದಿ ಕರೆಯoತೆ ಪ್ರತೀ ಬೂತ್ ಗಳಲ್ಲಿ ಹೆಚ್ಚಿನ ಮತ ಗಳಿಕೆಯೊಂದಿಗೆ ಬೂತ್ ಗೆಲ್ಲುವ ಮೂಲಕ ದೇಶ ಗೆಲ್ಲುವ ಸಂಕಲ್ಪದೊಂದಿಗೆ ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಶಾಸಕ ಯಶ್ಪಾಲ್ ಸುವರ್ಣ (Udupi MLA Yshpal Suvarna) , ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ (Kishore Kumar Kundapura) ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

