ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ
ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ
(Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಪ್ರಥಮ 10,000/-, ದ್ವಿತೀಯ 5,000/- ಹಾಗೂ 3,000/- ನಗದು ಬಹುಮಾನ ಮತ್ತು 5 ಸಮಾಧಾನಕರ ಬಹುಮಾನಗಳು, ಅಭಿನಂದನಾ ಪತ್ರ, ಸ್ಮರಣಿಕೆ ಗಳನ್ನೊಳಗೊಂಡಿದೆ.
ಸ್ಪರ್ಧೆಯ ನಿಯಮಗಳು
*ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು. ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4 MBಗಿಂತ ಹೆಚ್ಚು ಮೀರಬಾರದು. – ಮೊಬೈಲ್ ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
*ಪೋಟೋಶಾಪ್ ನಲ್ಲಿ ತಿರುಚಲಾದ ಮತ್ತು ವಾಟರ್ ಮಾರ್ಕ್ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
* ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.
*ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ.
*ಛಾಯಾಚಿತ್ರವನ್ನು ಇಮೇಲ್ ಮೂಲಕ ಕಳುಹಿಸುವಾಗ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.
*ತೀರ್ಪುಗಾರರ ತೀರ್ಮಾನವೇ ಅಂತಿಮ. ಉಡುಪಿ ಶ್ರೀ ಕೃಷ್ಣ ಮಠದ ಪರಿಸರದಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ (04-09-2026) ಹಾಗೂ ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿ ಮಹೋತ್ಸವದ (05-09-2026) ಛಾಯಾಚಿತ್ರಗಳಿಗೆ ಮಾತ್ರ ಅವಕಾಶ.
*ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ 15-09-2026. – ಫಲಿತಾಂಶವನ್ನು ದಿನಾಂಕ 25-09-2026 ರಂದು ಪ್ರಕಟಿಸಲಾಗುವುದು.
ಛಾಯಾಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: rameshyelluru@gmail.com, ನೋಂದಾಯಿಸಲು ಕೊನೆಯ ದಿನಾಂಕ 01-09-2026 ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್ ಉಚಿತ. ಟಿ-ಶರ್ಟ್ ಧರಿಸಿ ಛಾಯಾಗ್ರಹಣವನ್ನು ಮಾಡತಕ್ಕದ್ದು. ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಪಡೆದಿರುತ್ತೇವೆ.
ಚಿತ್ರ : ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪ್ರಚಾರದ ಬಿತ್ತಿ ಚಿತ್ರವನ್ನು ಪರ್ಯಾಯ ಶೀರೂರು ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರದಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಎಸ್ ಕೆಪಿಎ ಉಡುಪಿ ವಲಯದ ಅಧ್ಯಕ್ಷ ದಿವಾಕರ ಹಿರಿಯಡ್ಕ, ಮಾಜಿ ಅಧ್ಯಕ್ಷ ಜನಾರ್ದನ್ ಕೊಡವೂರು, ಸದಸ್ಯರಾದ ಸುರಭಿ ರತನ್ ಶೆಟ್ಟಿ, ಶ್ರೀಶ ಬಲ್ಲಾಳ್ ಹಾಗೂ ಶ್ರೀಮಠದ ಛಾಯಾಗ್ರಾಹಕ ಕೃತಿಕ್ ಭಟ್ ಉಪಸ್ಥಿತರಿದ್ದರು.

