ಉಡುಪಿ: ಜನಾರ್ದನ್ ಕೊಡವೂರು, ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಅಭಿನಂದನೆ (Udupi : Congratulations to Janardhana Kodavooru and Poornima Janardhan couple)
ಉಡುಪಿ:ಜನಾರ್ದನ್ ಕೊಡವೂರು, ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಅಭಿನಂದನೆ
(Udupi) ಉಡುಪಿ: ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಉಡುಪಿ ಸಂಸ್ಥೆಯ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ್ ಕೊಡವೂರು ಹಾಗೆಯೇ ಅಂಚೆ ಇಲಾಖೆಯ ಶ್ರೇಷ್ಠ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಪುರಸ್ಕೃತಗೊಂಡ ಪೂರ್ಣಿಮಾ ಜನಾರ್ದನ್ ದಂಪತಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿನಾಡೋಜ ಡಾ. ಕೆ. ಪಿ. ರಾವ್ , ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಪ್ರಭಾವತಿ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಡಾ. ಗಣನಾಥ್ ಎಕ್ಕಾರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆಯ ವ್ಯವಸ್ಥಾಪಕ ಹಫೀಸ್ ರೆಹಮಾನ್, ಅಂಬ್ರಯ್ಯ ಮಠ, ಡಾ. ಎಚ್. ಎಸ್. ಸತ್ಯನಾರಾಯಣ. ಡಾ. ಉಮೇಶ್ ಪುತ್ರನ್, ಮಧುಸೂದನ್ ಹೇರೂರು, ರವಿರಾಜ್ ಎಚ್.ಪಿ, ರಾಜೇಶ್ ಭಟ್ ಪಣಿಯಾಡಿ, ಸಂಧ್ಯಾ ಶೆಣೈ, ರಾಘವೇಂದ್ರ ನಾಯ್ಕ್, ರಾಘವೇಂದ್ರ ಪ್ರಭು ಕರ್ವಾಲ್ ಉಪಸ್ಥಿತರಿದ್ದರು.