• Home  
  • ಉಡುಪಿ ಜಿಲ್ಲಾಸ್ಪತ್ರೆಯ ಅಪೂರ್ಣ ಕಾಮಗಾರಿ ಉದ್ಘಾಟನೆಗೆ  : ನಮ್ಮ ಕರ್ನಾಟಕ ಸೇನೆ ವಿರೋಧ (Namma Karnataka Sene opposes the inauguration of incomplete work at Udupi District Hospital.)
- PROBLEMS

ಉಡುಪಿ ಜಿಲ್ಲಾಸ್ಪತ್ರೆಯ ಅಪೂರ್ಣ ಕಾಮಗಾರಿ ಉದ್ಘಾಟನೆಗೆ  : ನಮ್ಮ ಕರ್ನಾಟಕ ಸೇನೆ ವಿರೋಧ (Namma Karnataka Sene opposes the inauguration of incomplete work at Udupi District Hospital.)

Share: ಉಡುಪಿ ಜಿಲ್ಲಾಸ್ಪತ್ರೆಯ ಅಪೂರ್ಣ ಕಾಮಗಾರಿ ಉದ್ಘಾಟನೆಗೆ  : ನಮ್ಮ ಕರ್ನಾಟಕ ಸೇನೆ ವಿರೋಧ  ಬಡ ಜನರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಬೇಡ : ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ  (Udupi) ಉಡುಪಿ: ಉಡುಪಿ ಅಜ್ಜರಕಾಡಿನ ನೂತನ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸುಮಾರು ₹110 ಕೋಟಿ ರೂ. ವೆಚ್ಚ ಮಾಡಲಾಗಿದೆ ಎನ್ನಲಾಗಿದ್ದು, ಸುಮಾರು 250 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯ ಎಲ್ಲಾ ಕಾಮಗಾರಿಗಳು ಹಾಗೂ ವೈದ್ಯಕೀಯ ಸೌಲಭ್ಯಗಳು ಇನ್ನೂ ಸಂಪೂರ್ಣವಾಗಿ ಸಿದ್ಧವಾಗಿಲ್ಲ ಎಂಬ […]

 (Udupi) ಉಡುಪಿ: ಉಡುಪಿ ಅಜ್ಜರಕಾಡಿನ ನೂತನ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸುಮಾರು ₹110 ಕೋಟಿ ರೂ. ವೆಚ್ಚ ಮಾಡಲಾಗಿದೆ ಎನ್ನಲಾಗಿದ್ದು, ಸುಮಾರು 250 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯ ಎಲ್ಲಾ ಕಾಮಗಾರಿಗಳು ಹಾಗೂ ವೈದ್ಯಕೀಯ ಸೌಲಭ್ಯಗಳು ಇನ್ನೂ ಸಂಪೂರ್ಣವಾಗಿ ಸಿದ್ಧವಾಗಿಲ್ಲ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದ್ದು, ಆಸ್ಪತ್ರೆಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ಉದ್ಘಾಟಿಸಬೇಕೆಂದು ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ.

  ಆಸ್ಪತ್ರೆಯ ಕಟ್ಟಡ ದೊಡ್ಡದಾಗಿ ನಿರ್ಮಾಣವಾದರೆ ಮಾತ್ರ ಸಾಲದು. ಅಲ್ಲಿ ಬಡ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುವಂತಹ ಎಲ್ಲಾ ಮೂಲಭೂತ ಸೌಲಭ್ಯಗಳು ಇರಬೇಕು. ಅಗತ್ಯ ವೈದ್ಯರು, ನರ್ಸ್‌ಗಳು, ತಜ್ಞ ವೈದ್ಯಕೀಯ ಸಿಬ್ಬಂದಿ, ಡಿ-ಗ್ರೂಪ್ ನೌಕರರು ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಪೂರ್ಣಗೊಳ್ಳಬೇಕು.

  ಅದೇ ರೀತಿ ಸ್ಕ್ಯಾನಿಂಗ್ ಯಂತ್ರಗಳು, ಡಯಾಲಿಸಿಸ್ ಯಂತ್ರಗಳು ಸೇರಿದಂತೆ ಎಲ್ಲಾ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಬೇಕು. ಹಳೆಯದಾಗಿ ಹಾಳಾಗಿರುವ ಅಥವಾ ಸಮರ್ಪಕವಾಗಿ ಕಾರ್ಯನಿರ್ವಹಿಸದ ಡಯಾಲಿಸಿಸ್ ಯಂತ್ರಗಳನ್ನು ಬದಲಾಯಿಸಿ ಹೊಸ ಯಂತ್ರಗಳನ್ನು ಅಳವಡಿಸಬೇಕು.

  ಸುಮಾರು 250 ಹಾಸಿಗೆಗಳ ಆಸ್ಪತ್ರೆಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯವಿರುವ ವೈದ್ಯರು, ನರ್ಸ್‌ಗಳು ಮತ್ತು ಇತರ ಸಿಬ್ಬಂದಿಗಳ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಬೇಕು. ಸಿಬ್ಬಂದಿ ಕೊರತೆಯೊಂದಿಗೆ ಆಸ್ಪತ್ರೆಯನ್ನು ಉದ್ಘಾಟಿಸುವುದರಿಂದ ಬಡ ರೋಗಿಗಳಿಗೆ ಯಾವುದೇ ಪ್ರಯೋಜನವಾಗುವುದಿಲ್ಲ.

 ಯಾವುದೇ ರಾಜಕೀಯ ಒತ್ತಡಕ್ಕೆ ಮಣಿದು ಅಥವಾ ತರಾತುರಿಯಲ್ಲಿ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬಾರದು. ಉಡುಪಿ ಜಿಲ್ಲೆಯ ಬಡವರು, ಮಧ್ಯಮ ವರ್ಗದವರು ಹಾಗೂ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು ಎಂಬುದೇ ನಮ್ಮ ಉದ್ದೇಶ ಎಂದು ಸುಜಯ್ ಪೂಜಾರಿ ಒತ್ತಾಯಿಸಿದ್ದಾರೆ .

Leave a comment

Your email address will not be published. Required fields are marked *

eMedia Kannada  @2025. All Rights Reserved.