ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಉದ್ಘಾಟನೆ
ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ
(Udupi) ಉಡುಪಿ : ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಇದರ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಮಣಿಪಾಲ ಸರಳೀಬೆಟ್ಟು ರತ್ನ ಸಂಜೀವ ಕಲಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ಯವರು ಉದ್ಘಾಟಿಸಿ ಶುಭ ಹಾರೈಸಿದರು.
ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಇದರ ಉಪಾಧ್ಯಕ್ಷ ಮಹೇಶ್ ಠಾಕೂರ್ ರವರು ಭಾಗವಹಿಸಿ ಶುಭ ಹಾರೈಸಿದರು.
ಜಾನಪದ ಕಲೆಯ ಉತ್ತೇಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡುತ್ತಿರುವ ಮಹೇಶ್ ಠಾಕೂರ್ ಅವರನ್ನು ಘಟಕದ ವತಿಯಿಂದ “ಜಾನಪದ ಪ್ರಚಂಡ” ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವಿಭಾಗಿಯ ಸಂಚಾಲಕರಾದ ಡಾ. ಭಾರತಿ ಮರವಂತೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷೆ ಉಷಾ ಹೆಬ್ಬಾರ್, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪುತ್ತಿಗೆ ಮಠದ ದಿವಾಣರಾದ ನಾಗರಾಜ ಆಚಾರ್ಯ, ನಗರಸಭಾ ಮಾಜಿ ಸದಸ್ಯ ನರಸಿಂಹ ನಾಯಕ್, ರಾಘವೇಂದ್ರ ಪ್ರಭು ಕವಾ೯ಲು ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪರಿಷತ್ ಸದಸ್ಯರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

