• Home  
  • ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಕಳದ ಮೂವರಿಗೆ ಸ್ಥಾನ (Three people from Karkala get a place in the executive board of Udupi District Journalists Association)
- ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಕಳದ ಮೂವರಿಗೆ ಸ್ಥಾನ (Three people from Karkala get a place in the executive board of Udupi District Journalists Association)

Share: ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಕಳದ ಮೂವರಿಗೆ ಸ್ಥಾನ ಉಪಾಧ್ಯಕ್ಷರಾಗಿ ಉದಯ ಕುಮಾರ್‌, ಸದಸ್ಯರಾಗಿ ಮಹಮ್ಮದ್ ಶರೀಫ್, ರಾಂ ಅಜೆಕಾರು ಅವಿರೋಧ ಆಯ್ಕೆ  (Karkala) ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾರ್ಕಳ ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.   ವಿಜಯ ಕರ್ನಾಟಕ ಪತ್ರಿಕೆಯ ಬೆಳ್ಮಣ್‌ ವರದಿಗಾರ ಉದಯ ಕುಮಾರ್ ಮುಂಡ್ಕೂರು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ […]

 (Karkala) ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾರ್ಕಳ ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

  ವಿಜಯ ಕರ್ನಾಟಕ ಪತ್ರಿಕೆಯ ಬೆಳ್ಮಣ್‌ ವರದಿಗಾರ ಉದಯ ಕುಮಾರ್ ಮುಂಡ್ಕೂರು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯರಾಗಿದ್ದು, ಕಳೆದ ಅವಧಿಯಲ್ಲಿ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.

    ಸಾಮಾಜಿಕ ಕಾರ್ಯಕರ್ತ, ರಕ್ತದಾನಿ, ಆಪತ್ಭಾಂಧವ,  ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ವಾರ್ತಾಭಾರತಿ ಪತ್ರಿಕೆಯ ಕಾರ್ಕಳ ವರದಿಗಾರ ಮಹಮ್ಮದ್ ಶರೀಫ್ ಮತ್ತು ಕನ್ನಡ ಪ್ರಭ ಪತ್ರಿಕೆಯ ವರದಿಗಾರ ರಾಂ ಅಜೆಕಾರು ಅವರು ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಸ್ಥಾನ ಪಡೆದಿದ್ದಾರೆ.

   ರಾಂ ಅಜೆಕಾರು ಅವರು ವಿವಿಧ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು, ಇತ್ತೀಚೆಗೆ ರಾಜ್ಯ ದತ್ತಿನಿಧಿ ಪ್ರಶಸ್ತಿಯನ್ನು ಪಡೆದಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.