ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ
ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳು, ಸದಸ್ಯರಾಗಿ ವಿಜಯ, ಪ್ರಮೋದ್ ಆಯ್ಕೆ
(Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾಪು ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕರಾವಳಿ ಅಲೆ ಪತ್ರಿಕೆಯ ಕಾಪು ತಾಲೂಕು ವರದಿಗಾರ ಸುರೇಶ್ ಎರ್ಮಾಳುರವರು ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕರಾಟೆ ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಕಾಪು ತಾಲೂಕಿನ ಸಕ್ರಿಯ ಸದಸ್ಯರಾದ ಸುರೇಶ್ ಎಮಾಳುರವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದು, ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಉದಯವಾಣಿ ಪತ್ರಿಕೆಯ ಕಟಪಾಡಿ ವರದಿಗಾರ ವಿಜಯ ಆಚಾರ್ಯ ಉಚ್ಚಿಲರವರು ಎರಡನೇ ಅವಧಿಗೆ ಜಿಲ್ಲಾ ಸಮಿತಿಗೆ ಅವಿರೋಧವಾಗಿ ಆಯ್ಕೆ ಆಗಿದ್ದು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಅಧ್ಯಕ್ಷರಾಗಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಗಿಸಿಕೊಂಡಿರುವ ಪ್ರಮೋದ್ ಸುವರ್ಣರವರು ಎರಡನೇ ಅವಧಿಗೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

