ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಾಪು ಹೊಸ ಮಾರಿಗುಡಿಗೆ ಭೇಟಿ, ಪ್ರಾರ್ಥನೆ
(Kaup) ಕಾಪು : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ರವರು ತಮ್ಮ ಪತ್ನಿಯೊಂದಿಗೆ ಕಾಪುವಿನ ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಸಮಿತಿಯ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಮತ್ತಿತರರು ಉಪಸ್ಥಿತರಿದ್ದರು.
