• Home  
  • ಉಡುಪಿ: ಜಿಲ್ಲೆಯಲ್ಲಿ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತರಿಂದ ಗುಡ್ ಫ್ರೈಡೆ ಆಚರಣೆ (Udupi: Christians celebrate Good Friday with fasting, meditation and prayers in the district)
- ಧಾರ್ಮಿಕ

ಉಡುಪಿ: ಜಿಲ್ಲೆಯಲ್ಲಿ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತರಿಂದ ಗುಡ್ ಫ್ರೈಡೆ ಆಚರಣೆ (Udupi: Christians celebrate Good Friday with fasting, meditation and prayers in the district)

Share: ಉಡುಪಿ: ಜಿಲ್ಲೆಯಲ್ಲಿ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತರಿಂದ ಗುಡ್ ಫ್ರೈಡೆ ಆಚರಣೆ (Udupi) ಉಡುಪಿ: ಕ್ರೈಸ್ತ ಭಾಂಧವರಿಗೆ ಪವಿತ್ರ ದಿನವಾದ ಶುಭ ಶುಕ್ರವಾರ (ಗುಡ್ ಫ್ರೈಡೆ)ವನ್ನು ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಬೆಳಿಗ್ಗಿನಿಂದಲೇ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು.   ಕ್ರೈಸ್ತ ಬಾಂಧವರು ಬೆಳಿಗ್ಗಿನಿಂದಲೇ ಉಪವಾಸವನ್ನು ಕೈಗೊಂಡು ದಿನವಿಡೀ ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು. ಉಡುಪಿ ಧರ್ಮಪ್ರಾಂತ್ಯದ ಪ್ರಧಾನ […]

ಉಡುಪಿ: ಜಿಲ್ಲೆಯಲ್ಲಿ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತರಿಂದ ಗುಡ್ ಫ್ರೈಡೆ ಆಚರಣೆ

(Udupi) ಉಡುಪಿ: ಕ್ರೈಸ್ತ ಭಾಂಧವರಿಗೆ ಪವಿತ್ರ ದಿನವಾದ ಶುಭ ಶುಕ್ರವಾರ (ಗುಡ್ ಫ್ರೈಡೆ)ವನ್ನು ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಬೆಳಿಗ್ಗಿನಿಂದಲೇ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು.

  ಕ್ರೈಸ್ತ ಬಾಂಧವರು ಬೆಳಿಗ್ಗಿನಿಂದಲೇ ಉಪವಾಸವನ್ನು ಕೈಗೊಂಡು ದಿನವಿಡೀ ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು.

ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ (Jerald Isak Lobo) ಅವರು ಶುಭ ಶುಕ್ರವಾರದ ಪ್ರಾರ್ಥನಾವಿಧಿ ನೆರವೇರಿಸಿದರು.

 ಜಿಲ್ಲೆಯ ಕೆಲವು ಚರ್ಚುಗಳಲ್ಲಿ ಯೇಸುಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನುಪ್ಪುವ ಘಟನಾವಳಿಗಳನ್ನು ಪ್ರಸ್ತುತಪಡಿಸಲಾಯಿತು. ಧರ್ಮಗುರುಗಳು ರಕ್ತವರ್ಣದ ಪೂಜಾಬಟ್ಟೆ ಧರಿಸಿ ಯೇಸು ಕ್ರಿಸ್ತರ ಕೊನೆಯ ಘಳಿಗೆಗಳ ವೃತ್ತಾಂತ ಓದಿದರು. ಬಳಿಕ ಮುಚ್ಚಲ್ಪಟ್ಟ ಶಿಲುಬೆಯನ್ನು ಮೆರವಣಿಗೆಯಲ್ಲಿ ತಂದು ಅನಾವರಣಗೊಳಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.