ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ: (ಜುಲೈ 19) ಶುಕ್ರವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ರೆಡ್ ಅಲಟ್೯ ಘೋಷಿಸಿರುವ ಫಲವಾಗಿ ಶುಕ್ರವಾರ (ಜುಲೈ 19) ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ ಜಲಾವೃತವಾಗಿದೆ.
ಗುರುವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶುಕ್ರವಾರವೂ ನಿರಂತರ ಮಳೆಯಾಗುವ ಸಾಧ್ಯತೆ ಇದೆ.
ಪೋಷಕರು ಮಕ್ಕಳನ್ನು ಮಳೆಯಲ್ಲಿ ಹೊರಗೆ ಆಡಲು ಬಿಡದೆ, ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

