• Home  
  • ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ
- ಕರಾವಳಿ - ರಾಜಕೀಯ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ

Share: ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಹೆಜಮಾಡಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳವಾರ ಉಡುಪಿ ಜಿಲ್ಲಾ ಗಡಿ ಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೂ ಗುಚ್ಚದೊಂದಿಗೆ ಸ್ವಾಗತಿಸಿದರು.  ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪರವಾಗಿ […]

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ

ಹೆಜಮಾಡಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳವಾರ ಉಡುಪಿ ಜಿಲ್ಲಾ ಗಡಿ ಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೂ ಗುಚ್ಚದೊಂದಿಗೆ ಸ್ವಾಗತಿಸಿದರು.

 ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪರವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಹೂಗುಚ್ಛ ಹಾಗೂ ಹೂಹಾರಗಳೊಂದಿಗೆ ಸ್ವಾಗತಿಸಿದರು.

ಚೆಂಡೆ ವಾದನದೊಂದಿಗೆ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾಂಗ್ರೆಸ್ ಪಕ್ಷದ ವತಿಯಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು.

 ಪೋಲಿಸರು ಬ್ಯಾರಿಕೇಡ್ ಬಳಸಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದರು. ಕಾರಿನಿಂದ ಇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನೆರೆದ ಕಾಂಗ್ರೆಸ್ ಕಾರ್ಯಕರ್ತರನ್ನು ಕಂಡು ಸುಮಾರು ೩೦ ಮೀಟರ್ ಹೆಜ್ಜೆ ಹಾಕಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಪಕ್ಷದ ಪ್ರಮುಖರಾದ ಡಾ.ರಾಜಶೇಖರ್ ಕೋಟ್ಯಾನ್, ಪ್ರಸಾದ್‌ರಾಜ್ ಕಾಂಚನ್, ಉದಯಕುಮಾರ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳವಳ್ಳಿ, ಗೀತಾ ವಾಗ್ಲೆ, ವೆರೋನಿಕಾ ಕರ್ವಾಲಿಯೋ, ನವೀನ್‌ಚಂದ್ರ ಜೆ.ಶೆಟ್ಟಿ, ಅಬ್ದುಲ್ ಅಜೀಜ್, ಮದನ್ ಕುಮಾರ್, ಸಂತೋಷ್ ಕುಲಾಲ್, ಹರಿಪ್ರಸಾದ್ ಶೆಟ್ಟಿ, ರಾಜು ಪೂಜಾರಿ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಜತ್ತನ್ನ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಶೇಖರ್ ಪೂಜಾರಿ ಬೈಂದೂರು, ಭುಜಂಗ ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಹರೀಶ್ ನಾಯಕ್, ಉಸ್ಮಾನ್, ದೇವಾನಂದ ಶೆಟ್ಟಿ, ಜಿತೇಂದ್ರ ಫುರ್ಟಾಡೋ, ಸುಧೀರ್ ಕರ್ಕೇರ, ರೋಲ್ಫಿ ಡಿಕೋಸ್ತಾ, ಶೇಖರ್ ಹೆಜ್ಮಾಡಿ, ಶರ್ಫುದ್ದೀನ್‌ ಶೇಖ್‌, ವೈ.ಸುಕುಮಾರ್, ದೀಪಕ್ ಎರ್ಮಾಳ್, ರೋಶನ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಸರಸು ಬಂಗೇರ, ರಮೀಝ್ ಹುಸೈನ್, ಯು.ಸಿ.ಶೇಖಬ್ಬ, ಶಿವಾಜಿ ಸುವರ್ಣ, ಡಿ.ಆರ್. ರಾಜು, ಕರುಣಾಕರ ಪೂಜಾರಿ, ಜಿಲ್ಲಾಡಳಿತದ ಪರವಾಗಿ ಎಸಿ ರಶ್ಮಿ, ಸಿಎಸ್ ಪ್ರಸನ್ನ ಎಚ್., ಇಒ ನವೀನ್ ಕುಮಾರ್ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.