ಉಡುಪಿ: ಜೂನ್ 27. ಜಿಲ್ಲಾಧಿಕಾರಿ ಕಚೇರಿಯಲ್ಲಿ ರಕ್ತದಾನ ಶಿಬಿರ
(Udupi) ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಛೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆ ಇವರ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಉಡುಪಿ ಮತ್ತು ರಕ್ತನಿಧಿ ಕೇಂದ್ರ, ಕೆ.ಎಂ.ಸಿ., ಮಣಿಪಾಲ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ಜೂನ್ 27ರ ಶುಕ್ರವಾರದಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.30ರ ವರೆಗೆ, ಮಣಿಪಾಲ ಜಿಲ್ಲಾಧಿಕಾರಿ ಕಛೇರಿಯ ವಾಜಪೇಯಿ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಉದ್ಘಾಟನೆಯನ್ನು ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ್ ಕೆ.ಟಿ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ, ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ, ಉಡುಪಿ ಸರಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್, ದಿನಕರ ಶೆಟ್ಟಿ ಅಂಪಾರು, ಡಾ| ಶಮ್ಮಿ ಶಾಸ್ತ್ರಿ, ಭಾಗವಹಿಸಲಿದ್ದಾರೆ ಎಂದು ರಕ್ತದಾನ ಶಿಬಿರದ ಸಂಯೋಜಕರಾದ ಸಂಪತ್ ಮತ್ತು ಯತೀಶ್ ಕಿದಿಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಬಹುದು- 9980962101, 8553220926

