ಉಡುಪಿ: ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ಹಾಗೂ ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಇವರ ಜಂಟಿ ಆಶ್ರಯದಲ್ಲಿ ಜೂನ್ 11ರಂದು ಬೆಳಿಗ್ಗೆ 10 ಗಂಟೆಯಿಂದ ಕೊಡವೂರು ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳವನ್ನು ನಡೆಸಲಾಗುವುದು ಎಂದು ಮಿತೇಶ್ ಕುಮಾರ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9137386752 ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

