• Home  
  • ಉಡುಪಿ : ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು (Udupi: Child dies after saree tied to sack wraps around neck)
- Uncategorised

ಉಡುಪಿ : ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು (Udupi: Child dies after saree tied to sack wraps around neck)

Share: ಉಡುಪಿ : ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು  (Udupi) ಉಡುಪಿ, ಜೂ.6: ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಒಂದು ವರ್ಷದ ಮಗು ಮೃತಪಟ್ಟ ಘಟನೆ ಉಡುಪಿ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಘಟಿಸಿದೆ.  ನಿಟ್ಟೂರು ಪುತ್ತೂರು ಗ್ರಾಮದ ಬಾಡಿಗೆ ಮನೆ ನಿವಾಸಿ ಅಯ್ಯಪ್ಪ ಎಂಬವರ ಹೆಣ್ಣು ಮಗು ಕಾಳಮ್ಮ(1) ಮೃತಪಟ್ಟ ಮಗು.   ಅಯ್ಯಪ್ಪನವರ ಕುಟುಂಬ ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸವನ್ನು ಮಾಡಿಕೊಂಡಿದ್ದು, ಇವರ ಪತ್ನಿ ಮಗುವನ್ನು ಜೋಳಿಗೆಯಲ್ಲಿ ಮಲಗಿಸಿ […]

 (Udupi) ಉಡುಪಿ, ಜೂ.6: ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಒಂದು ವರ್ಷದ ಮಗು ಮೃತಪಟ್ಟ ಘಟನೆ ಉಡುಪಿ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಘಟಿಸಿದೆ.

 ನಿಟ್ಟೂರು ಪುತ್ತೂರು ಗ್ರಾಮದ ಬಾಡಿಗೆ ಮನೆ ನಿವಾಸಿ ಅಯ್ಯಪ್ಪ ಎಂಬವರ ಹೆಣ್ಣು ಮಗು ಕಾಳಮ್ಮ(1) ಮೃತಪಟ್ಟ ಮಗು.

  ಅಯ್ಯಪ್ಪನವರ ಕುಟುಂಬ ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸವನ್ನು ಮಾಡಿಕೊಂಡಿದ್ದು, ಇವರ ಪತ್ನಿ ಮಗುವನ್ನು ಜೋಳಿಗೆಯಲ್ಲಿ ಮಲಗಿಸಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು ಎನ್ನಲಾಗಿದೆ.

 ವಾಪಸ್ ಮನೆಗೆ ಬಂದು ನೋಡಿದಾಗ ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಮೃತಪಟ್ಟಿರುವುದು ಕಂಡುಬಂದಿದೆ.

  ಮಗು ಜೋಳಿಗೆಯಿಂದ ಕೆಳಗಿಳಿಯಲು ಹೋಗಿ ಅಥವಾ ನಿದ್ರಾ ಸ್ಥಿತಿಯಲ್ಲಿ ಜೋಳಿಗೆಯಿಂದ ಬಿದ್ದು ಉಸಿರುಕಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

 ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.