ಉಡುಪಿ: ಡೆಂಗಿ, ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ- ಉಡುಪಿ ಡಿಸಿ ವಿದ್ಯಾಕುಮಾರಿ
(Udupi) ಉಡುಪಿ: ಡೆಂಗಿ ಹಾಗೂ ಮಲೇರಿಯಾ ಕುರಿತು ಜನಸಾಮಾನ್ಯ ರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ವಿಶ್ವ ಮಲೇರಿಯಾ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಆಯೋಜಿಸಲಾಗಿತ್ತು.
ಜಾಥಾವು ಬೋರ್ಡ್ ಹೈಸ್ಕೂಲ್‌ನಿಂದ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಪುರಭವನದಲ್ಲಿ ಸಮಾಪನಗೊಂಡಿತು.
ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ(Udupi dc Dr Vidhyakumari), ಮಲೇರಿಯಾ ಹಾಗೂ ಡೆಂಗಿ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಅತೀ ಮುಖ್ಯ. ಈ ರೋಗಗಳಿಂದ ಆಗುವ ಅಪಾಯಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದಲೇ ಜಾಥಾವನ್ನು ಕೈಗೊಳ್ಳಲಾಗಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಹಾಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿ ಕೊಳ್ಳಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು, ಮೈತುಂಬಾ ಬಟ್ಟೆಗಳನ್ನು ಧರಿಸುವುದು, ಮಲಗುವಾಗ ಸೊಳ್ಳೆ ಪರದೆ ಬಳಸಬೇಕು ಎಂದರು.

