• Home  
  • ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 – ನಿಷೇಧಾಜ್ಞೆ ಜಾರಿ (Udupi: Second PUC Exam-2 – Prohibitory Order Enforced)
- ಶಾಲಾ ಕಾಲೇಜು

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 – ನಿಷೇಧಾಜ್ಞೆ ಜಾರಿ (Udupi: Second PUC Exam-2 – Prohibitory Order Enforced)

Share: ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 – ನಿಷೇಧಾಜ್ಞೆ ಜಾರಿ (Udupi) ಉಡುಪಿ: ಎಪ್ರಿಲ್ 24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಈ ಪರೀಕ್ಷೆಗಳನ್ನು ದೋಷ ರಹಿತವಾಗಿ ನಡೆಸಲು ನಿಗದಿ ಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ  ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.  ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ […]

(Udupi) ಉಡುಪಿ: ಎಪ್ರಿಲ್ 24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ಈ ಪರೀಕ್ಷೆಗಳನ್ನು ದೋಷ ರಹಿತವಾಗಿ ನಡೆಸಲು ನಿಗದಿ ಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ  ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

 ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್‌ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಂತಿಲ್ಲ.

 ಲಾಗ್‌ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳು ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

 ಪರೀಕ್ಷಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು.

ಈ ನಿಷೇಧಾಜ್ಞೆ ಆದೇಶ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಎಪ್ರಿಲ್ 24ರಿಂದ ಮೇ 8ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.