ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ
(Bengaluru) ಬೆಂಗಳೂರು: ಉಡುಪಿ : ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ವಿದ್ಯಾರ್ಥಿಗಳ ಹಿತರಕ್ಷಣೆಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ಮಂಗಳವಾರ (ಜುಲೈ 16)ದಂದು ರಜೆ ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿ .
ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಮಂಗಳವಾರ ರಜೆ ಘೋಷಿಸಲಾಗಿದೆ.

