ಉಡುಪಿ ನಾಲ್ವರ ಹತ್ಯೆ ಪ್ರಕರಣ: ಮಲ್ಪೆ ನೇಜಾರಿನ ತೃಪ್ತಿನಗರದಲ್ಲಿಆರೋಪಿ, ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ, ಲಾಠೀ ಪ್ರಹಾರ
(UDUPI) ಉಡುಪಿ: ಮಲ್ಪೆ ನೇಜಾರಿನ ತೃಪ್ತಿ ನಗರದಲ್ಲಿ (Malpe Nejaru Tripi nagara) ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿ ಪ್ರವೀಣ್ ಅರುಣ್ ಚೌಗುಳೆ (Pravin Arun Chaugle) ಯನ್ನು ಪೊಲೀಸರು ಸ್ಥಳ ಮಹಜರಿಗೆ ತಂದಾಗ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು.
ಸಾರ್ವಜನಿಕರು ರಸ್ತೆ ತಡೆ ನಡೆಸಿ ಆರೋಪಿ ಪ್ರವೀಣ್ ಅರುಣ್ ಚೌಗುಳೆಯನ್ನುತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿದರು.
ಆತ ನಾಲ್ವರನ್ನು ಕೊಲ್ಲಲು15 ನಿಮಿಷ ತೆಗೆದುಕೊಂಡಿದ್ದಾನೆ. ನಮಗೆ 30 ಸೆಕೆಂಡು ಕೊಡಿ. ಅವನಿಗೆ ನಾವು ಶಿಕ್ಷೆ ನೀಡುತ್ತೇವೆ ಎಂದು ಸ್ಥಳೀಯರು ಆಕ್ರೋಶಿತರಾಗಿ ಹೇಳಿದ್ದಾರೆ.
ಇದೇ ವೇಳೆ ಆರೋಪಿ ಇದ್ದ ವಾಹನದೆಡೆ ಸ್ಥಳೀಯರು ನುಗ್ಗಿ ಬಂದಿದ್ದಾರೆ. ಸ್ಥಳೀಯರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಕೆಲಕಾಲ ಬಿಗುವಿನ ವಾತಾವರಣ ಉಂಟಾಯಿತು.
ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಪೊಲೀಸರು ಲಘು ಲಾಠೀ ಪ್ರಹಾರ ನಡೆಸಿ ಪ್ರತಿಭಟನಾಕಾರನ್ನು ಚದುರಿಸಿದ್ದಾರೆ.
ಮೃತರ ಸಂಬಂಧಿಗಳು ಹಾಗೂ ಸ್ನೇಹಿತರು ಆರೋಪಿಯ ವಿರುದ್ದ ಫೋಷಣೆ ಕೂಗಿ, ಮಹಜರು ಮುಗಿಸಿ ವಾಪಾಸು ಹೊರಡುವ ಸಮಯದಲ್ಲಿ ವಾಹನವನ್ನು ತಡೆದು ನಿಲ್ಲಿಸುವ ಪ್ರಯತ್ನ ಮಾಡಿದ್ದು, ಈ ಸಮಯ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿ ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.
ಪ್ರಸ್ತುತ ಪರಿಸ್ಥಿತಿ ಶಾಂತವಾಗಿ ಈ ಬಗ್ಗೆ ಆ ಸಮುದಾಯದ ಹಿರಿಯರೊಂದಿಗೆ ಚರ್ಚಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಲಾಯಿತು.
