ಉಡುಪಿ : ನಾಳೆ (ಮಾ.15) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ (Udupi: Union Minister Prahlad Joshi will visit BJP Udupi district office tomorrow, March 15)

ಉಡುಪಿ : ನಾಳೆ (ಮಾ.15) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ
(Udupi) ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15ರ ಬೆಳಿಗ್ಗೆ ಗಂಟೆ 9.30ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಾಗೂ ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ನೀಡಲಿದ್ದಾರೆ.
ಸಂಜೆ ಗಂಟೆ 4.45ಕ್ಕೆ ಬಿಜೆಪಿ ಹಿರಿಯ ನಾಯಕ ದಿ. ಸೋಮಶೇಖರ್ ಭಟ್ ಅವರ ನಿವಾಸಕ್ಕೆ ಬೇಟಿ ನೀಡಿ, ಸಂಜೆ ಗಂಟೆ 6.30ಕ್ಕೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಮಿಯ್ಯಾರು ಲವ – ಕುಶ ಬಯಲು ಕಂಬಳವನ್ನು ವೀಕ್ಷಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.