• Home  
  • ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ (Udupi Netra Jyothi College Anniversary)
- ಸಂಘ, ಸಂಸ್ಥೆಗಳು

ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ (Udupi Netra Jyothi College Anniversary)

Share:   ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತಿ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್ ಬಳಕೆಯ ದುಷ್ಟಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ […]

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತಿ

(Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.

   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್ ಬಳಕೆಯ ದುಷ್ಟಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅನೇಕ ಉದಾಹರಣೆಗಳ ಮೂಲಕ ತಿಳಿಸಿದರು.

   ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ,  ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಬೇಕಾದರೆ ನಿರಂತರ ಪ್ರಯತ್ನ ಬೇಕು. ಸಮಾಜ ನಮಗೆ ವಿವಿಧ ರೀತಿಯಲ್ಲಿ ಪಾಠವನ್ನು ಕಲಿಸುತ್ತದೆ ಎಂದರು.

   ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ, ಅಧ್ಯಕರಾದ ಡಾ. ಕೃಷ್ಣಪ್ರಸಾದ್ ಕೂಡ್ಲುರವರು ವಹಿಸಿದ್ದರು.

   ಅವರು ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳು ಮತ್ತು ಸಮಾಜ ವಿರೋಧಿ ಚಟುವಟಿಕೆಗಳಿಂದ ದೂರವಿದ್ದರೆ ಮಾತ್ರ ಒಂದು ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

  ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮೀ ಕೃಷ್ಣಪ್ರಸಾದ್,   ಕಾಲೇಜಿನ ಸಿ ಓ ಓ ಡಾ. ಗೌರಿ ಪ್ರಭು ಉಪಸ್ಥಿತರಿದ್ದರು.

  ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮಾಧವ ಪೂಜಾರಿ ಸ್ವಾಗತಿಸಿದರು. ಕು ನಿವೇದಿತಾ ವಂದಿಸಿದರು. ಕು. ಐಶ್ವರ್ಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.