• Home  
  • ಉಡುಪಿ ಪರ್ಯಾಯ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು (Udupi Paryaya: Adamru shree handed over the power of Krishna Puja’s to Puttige Shree)
- ಕರಾವಳಿ - ಪ್ರಚಲಿತ

ಉಡುಪಿ ಪರ್ಯಾಯ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು (Udupi Paryaya: Adamru shree handed over the power of Krishna Puja’s to Puttige Shree)

Share: ಉಡುಪಿ ಪರ್ಯಾಯ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು ಉಡುಪಿ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರವನ್ನು ಅದಮಾರು ಹಿರಿಯ ಶ್ರೀಗಳಾದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಸ್ತಾಂತರಿಸಿದ  ಅಪೂರ್ವ ಘಟನೆ ನಡೆಯಿತು. ಗುರುವಾರ ಮುಂಜಾನೆ ನಡೆದ ಪುತ್ತಿಗೆ ಮಠದ 4ನೇ ಪರ್ಯಾಯೋತ್ಸವು ಅಪೂರ್ವ ಘಟನೆಗೆ ಸಾಕ್ಷಿಯಾಯಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು (Puttige Shree Sugunendra Swamiji) ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು (Adamaru […]

ಉಡುಪಿ ಪರ್ಯಾಯ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು

ಉಡುಪಿ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರವನ್ನು ಅದಮಾರು ಹಿರಿಯ ಶ್ರೀಗಳಾದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಸ್ತಾಂತರಿಸಿದ  ಅಪೂರ್ವ ಘಟನೆ ನಡೆಯಿತು.

ಗುರುವಾರ ಮುಂಜಾನೆ ನಡೆದ ಪುತ್ತಿಗೆ ಮಠದ 4ನೇ ಪರ್ಯಾಯೋತ್ಸವು ಅಪೂರ್ವ ಘಟನೆಗೆ ಸಾಕ್ಷಿಯಾಯಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು (Puttige Shree Sugunendra Swamiji) ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು (Adamaru Shree Vishwa Priya Threertha Swamiji)  ಕೈಹಿಡಿದು ಸರ್ವಜ್ಞ ಪೀಠಾರೋಹಣ ಮಾಡಿಸಿ, ಕೃಷ್ಣನ ಪೂಜೆಯ ಅಧಿಕಾರವನ್ನು ಒಪ್ಪಿಸಿದರು.

ಸಹಜ ಪ್ರಕ್ರಿಯೆಯಂತೆ ಕೃಷ್ಣಾಪುರ ಮಠಾಧೀಶರು ಅಧಿಕಾರವನ್ನು ಹಸ್ತಾಂತರಿಸಬೇಕಿತ್ತು. ಆದರೆ ಪುತ್ತಿಗೆ ಶ್ರೀಯವರೊಂದಿಗಿನ ಮನಸ್ಥಾಪದಲ್ಲಿ ಕಳೆದ ಪರ್ಯಾಯ ಮತ್ತು ಈ ಬಾರಿಯ ಪರ್ಯಾಯದಲ್ಲಿ ಅಧಿಕಾರ ಹಸ್ತಾಂತರಿಸದೆ ನಿರ್ಗಮನಗೊಂಡಿದ್ದರು.

 ಪುತ್ತಿಗೆ ಶ್ರೀಗಳು ವಿದೇಶ ಪ್ರಯಾಣ, ಸಮುದ್ರೊಲ್ಲಂಘನೆ ಮಾಡಿದ್ದು ಶಾಸ್ತ್ರ ಉಲ್ಲಂಘನೆ ಎಂಬ ಕಾರಣಕ್ಕೆ ಅವರ ಕಳೆದ ಬಾರಿಯ 3ನೇ ಪರ್ಯಾಯೋತ್ಸವ, ಮೆರವಣಿಗೆ, ದರ್ಬಾರ್ ನಲ್ಲಿ ಇತರ ಸ್ವಾಮೀಜಿಗಳು ಭಾಗವಹಿಸಿರಲಿಲ್ಲ.

ಅಂದು ಭೀಮನಕಟ್ಟೆ ಮಠದ ಶ್ರೀ ರಘುಮಾನ್ಯ ತೀರ್ಥರು ಪುತ್ತಿಗೆ ಶ್ರೀಗಳಿಗೆ ಪೀಠಾರೋಹಣಕ್ಕೆ ಸಹಕರಿಸಿದ್ದರು. ಈ ಬಾರಿಯೂ ಇತರ ಮಠಾಧೀಶರು ಪರ್ಯಾಯೋತ್ಸವದಲ್ಲಿ ಭಾಗವಹಿಸದೇ ಇರುವುದರಿಂದ ಪುತ್ತಿಗೆ ಶ್ರೀಗಳಿಗೆ ಪರ್ಯಾಯ ಅಧಿಕಾರ ಹಸ್ತಾಂತರ ಯಾರು ಮಾಡುತ್ತಾರೆ ಎಂಬ ಬಗ್ಗೆ ಭಕ್ತರಲ್ಲಿ ಆತಂಕ ಉಂಟಾಗಿತ್ತು.

 ಈ ಆತಂಕವನ್ನು ಅದಮಾರು ಹಿರಿಯ ಶ್ರೀಗಳು ನಿರಾತಂಕಗೊಳಿಸಿದ್ದಾರೆ. ಈ ಬಾರಿಯೂ ಪುತ್ತಿಗೆ ಶ್ರೀಗಳ ಪರ್ಯಾಯೋತ್ಸವದ ಮೆರವಣಿಗೆಯಲ್ಲಿ, ದರ್ಬಾರಿನಲ್ಲಿ ಇತರ ಮಠಾಧೀಶರು ಭಾಗವಹಿಸಿರಲಿಲ್ಲ.

 ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಪಟ್ಟ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ ಆಗಮಿಸಿದ್ದರು.

ಕಳೆದ 2 ವರ್ಷಗಳಿಂದ ಕೃಷ್ಣ ಪರ್ಯಾಯ ಪೂಜೆಯನ್ನು ಯಶಸ್ವಿಯಾಗಿ ನಡೆಸಿದ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥರು ತಮ್ಮ ಕೊನೆಯ ಪೂಜೆಯನ್ನು ಮುಗಿಸಿ ತಮ್ಮ ಮಠಕ್ಕೆ ಹಿಂತಿರುಗಿದ್ದರು.

 ನಿರ್ಗಮನ ಪೀಠಾಧೀಶರು ಅಕ್ಷಯಪಾತ್ರೆ, ಕೃಷ್ಣಮಠದ ಕೀಲಿಕೈಗಳನ್ನು ನಿಯೋಜಿತ ಪೀಠಾದೀಶರಿಗೆ ಹಸ್ತಾಂತರಿಸಿ, ಸರ್ವಜ್ಞ ಪೀಠಾರೋಹಣ ಮಾಡಿಸಿ, ಕೃಷ್ಣನ ಪೂಜೆಯ ಅಧಿಕಾರವನ್ನು ಬಿಟ್ಟುಕೊಡುವುದು ಪದ್ದತಿಯಾಗಿದೆ. ಆದರೆ ಅವರು ತಮ್ಮ ಕರ್ತವ್ಯ ನಿರ್ವಹಿಸಿಲ್ಲ.

ಗುರುವಾರ ಮುಂಜಾನೆ ಪುತ್ತಿಗೆ ಶ್ರೀಗಳಿಗೆ ಅದಮಾರು ಶ್ರೀಗಳು ಅಕ್ಷಯಪಾತ್ರೆಯನ್ನು ಹಸ್ತಾಂತರಿಸಿ, ಸರ್ವಜ್ಞ ಪೀಠಾರೋಹಣ ಮಾಡಿಸಿ, ಅಷ್ಟ ಮಠಗಳ ನಡುವೆ ಒಗ್ಗಟ್ಟಿನ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.