• Home  
  • ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ (BJP is afraid of defeat in the Lok Sabha elections- CM)
- ರಾಜಕೀಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ (BJP is afraid of defeat in the Lok Sabha elections- CM)

Share: ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ (CAA implementation is BJP’s election Gimmick: Chief Minister Siddaramaiah)   (Udupi) ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief […]

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ

ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ (CAA implementation is BJP’s election Gimmick: Chief Minister Siddaramaiah)

  (Udupi) ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ತಿಳಿಸಿದರು.

  ಉಡುಪಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ  ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

 ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

 ಪಕ್ಷಕ್ಕೆ ಬಲ

 ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ಈ ಸಂದರ್ಭ ಉಡುಪಿ ಉಸ್ತಿವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar), ಮೀನುಗಾರಿಕ ಸಚಿವ ಮಂಕಾಳ ಎಸ್‌ ವೈದ್ಯ (Mankala S Vaidhya) , ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ(EX Minister JP Hegde), ಮಾಜಿ ಸಚಿವ ವಿನಯಕುಮಾರ್‌ ಸೊರಕೆ(EX Minister Vinaykumar Sorake), ಐವನ್‌ ಡಿಸೋಜಾ(Ivan D’Souza), ಉಡುಪಿ ಕಾಂಗ್ರೆಸ್‌ ಪದಾಧಿಕಾರಿಗಳು, ಕಾರ್ಯಕತ್ರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.