• Home  
  • ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ (Founders Day of Bharath Scouts and Guides)
- ಸಂಘ, ಸಂಸ್ಥೆಗಳು

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ (Founders Day of Bharath Scouts and Guides)

Share: ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ (Udupi) ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ  ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆಯನ್ನು ಉಡುಪಿ ಜಿಲ್ಲಾಧಿಕಾರಿಯವರ  ಕಚೇರಿಯಲ್ಲಿ ಆಚರಿಸಲಾಯಿತು  ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಸಮ್ಮುಖದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ […]

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

(Udupi) ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ  ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆಯನ್ನು ಉಡುಪಿ ಜಿಲ್ಲಾಧಿಕಾರಿಯವರ  ಕಚೇರಿಯಲ್ಲಿ ಆಚರಿಸಲಾಯಿತು

 ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಸಮ್ಮುಖದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ  ಹರಿ ಪ್ರಸಾದ್ ರೈ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ, ದಳ ನಾಯಕಿಯರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಬನ್ನಿ ಕಬ್, ಬುಲ್ ಬುಲ್ ಸ್ಕೌಟ್ಸ್, ಗೈಡ್ಸ್, ರೋವರ್, ರೇಂಜರ್ಸ್, ಇವರೆಲ್ಲರ ಸಮ್ಮುಖದಲ್ಲಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು. 

 ಜಿಲ್ಲಾಧಿಕಾರಿಯವರು  ಸ್ಕೌಟ್ಸ್  ಗೈಡ್ಸ್ ನಿಧಿಗೆ ದೇಣಿಗೆ ನೀಡುವುದರ ಮೂಲಕ  ಉದ್ಘಾಟಿಸಿದರು. ಜಿಲ್ಲಾ ಪದಾಧಿಕಾರಿಯವರೆಲ್ಲರೂ ಅವರೊಂದಿಗೆ ಕೈಜೋಡಿಸಿದರು. ಇತರ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ದೇಣಿಗೆಯನ್ನು ಸಂಗ್ರಹಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.