• Home  
  • ಉಡುಪಿ ರಾಜಾಂಗಣದಲ್ಲಿಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆ
- ಕರಾವಳಿ - ಜೀವನಶೈಲಿ - ವ್ಯವಹಾರ

ಉಡುಪಿ ರಾಜಾಂಗಣದಲ್ಲಿಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆ

Share: ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಉಡುಪಿ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು.   80 ವಯಸ್ಸು ದಾಟಿರುವ ಹಿರಿಯ ಸದಸ್ಯರನ್ನು ಪರ್ಯಾಯ ಶ್ರೀಪಾದರು ಗೌರವಿಸಿದರು. ಇದುವರೆಗೆ ಸರಕಾರಿ ಸೇವೆಯಲ್ಲಿದ್ದು ನಿವೃತ್ತಿ ಹೊಂದಿದ ನೌಕರರು ಪ್ರವೃತ್ತಿಯಲ್ಲಿ ತಮ್ಮನ್ನು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ದೈಹಿಕ ದೃಢತೆ,ಮಾನಸಿಕ ಸ್ಥೈರ್ಯವನ್ನು ಕಾಪಾಡಿಕೊಳ್ಳಬೇಕೆಂದು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ಮತ್ತು ಕಾರ್ಕಳ ತಾಲೂಕು ಸಂಘದ ಅಧ್ಯಕ್ಷರುಗಳನ್ನು ಗೌರವಿಸಿದರು. […]

ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಉಡುಪಿ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು.

  80 ವಯಸ್ಸು ದಾಟಿರುವ ಹಿರಿಯ ಸದಸ್ಯರನ್ನು ಪರ್ಯಾಯ ಶ್ರೀಪಾದರು ಗೌರವಿಸಿದರು.

ಇದುವರೆಗೆ ಸರಕಾರಿ ಸೇವೆಯಲ್ಲಿದ್ದು ನಿವೃತ್ತಿ ಹೊಂದಿದ ನೌಕರರು ಪ್ರವೃತ್ತಿಯಲ್ಲಿ ತಮ್ಮನ್ನು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ದೈಹಿಕ ದೃಢತೆ,ಮಾನಸಿಕ ಸ್ಥೈರ್ಯವನ್ನು ಕಾಪಾಡಿಕೊಳ್ಳಬೇಕೆಂದು ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಕುಂದಾಪುರ ಮತ್ತು ಕಾರ್ಕಳ ತಾಲೂಕು ಸಂಘದ ಅಧ್ಯಕ್ಷರುಗಳನ್ನು ಗೌರವಿಸಿದರು.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ರವರು ಸಭೆಗೆ ಆಗಮಿಸಿ,ನೀವೆಲ್ಲ ಸರಕಾರಿ ಸೇವೆಯಲ್ಲಿದ್ದು,ಸರಕಾರದ ಅನೇಕ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ,ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸುವಲ್ಲಿ ಸಹಕರಿಸಿದ್ದೀರಿ.    

ನಿವೃತ್ತಿ ನಂತರ ಇಂತಹ ಸಂಘಟನೆ ಮೂಲಕ ತಮ್ಮ ಅನುಭವವನ್ನು ಹಂಚಿಕೊಳ್ಳುವಂತಾಗಲಿ ಎಂದು ನುಡಿದರು.


ಸಂಘದ ಅಧ್ಯಕ್ಷರಾದ ಎಂ.ನಾರಾಯಣ ಭಟ್  ಸ್ವಾಗತಿಸಿದರು.

ಕಳೆದ ವರ್ಷದಲ್ಲಿ ನಿಧನರಾದ ಸಂಘದ ಸದಸ್ಯರ ವಿವರವನ್ನು ಸಂಘದ ಸದಸ್ಯರಾದ ರಘುರಾಮ್ ಶೆಟ್ಟಿಯವರು ನೀಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಉಪಾಧ್ಯಕ್ಷರಾದ ಹರಿಕೃಷ್ಣ ಶಿವತ್ತಾಯರು ಧನ್ಯವಾದ ನೀಡಿದರು.

ಸಂಘದ ಕಾರ್ಯದರ್ಶಿ ಆನಂದ ಗಾಣಿಗರವರು ಸಂಘದ ವರದಿಯನ್ನು ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.