ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ
ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮ
(Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನಾಚರಣೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮೊದಲಿಗೆ ಜಯಶ್ರೀ ಶೇಟ್, ಸುದರ್ಶನ್ ಪಡುಕರೆ ಹಾಗೂ ತಾರಾನಾಥ ಸುವರ್ಣ ಅವರಿಂದ ಗಾಂಧಿ ಸ್ಮೃತಿ ಸಂಗೀತ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಹಾಗೂ ರಮೇಶ್ ಕಾಂಚನ್ ಅವರು ಜೊತೆಗೂಡಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇಶಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿ ಅವರಿಗೆ ನಮನ ಸಲ್ಲಿಸಿದರು.
ನಿವೃತ್ತ ಅಧ್ಯಾಪಕರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ದಯಾನಂದ್ ಕಿದಿಯೂರು ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತು ಸ್ಪೂರ್ತಿದಾಯಕ ನುಡಿಗಳನ್ನು ಸಭೆಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಶರ್ಫುದ್ದೀನ್ ಶೇಖ್ ಸಹಿತ ಗಣ್ಯರು ಉಪಸ್ಥಿತರಿದ್ದರು.

