ಉಡುಪಿ: ವಿಶ್ವೇಶ್ವರಯ್ಯ ಕಟ್ಟಡದ ಮರು ನಿರ್ಮಾಣಕ್ಕೆ ಚಾಲನೆ
ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ನಗರಸಭಾಧ್ಯಕ್ಷ ಪ್ರಭಾಕರ್ ಪೂಜಾರಿ
(Udupi) ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿರುವ ವಿಶ್ವೇಶ್ವರಯ್ಯ ಕಟ್ಟಡವನ್ನು ಮರು ನಿರ್ಮಾಣಗೊಳಿಸುವ ಕಾಮಗಾರಿ ಉಡುಪಿ ನಗರಸಭೆಯಿಂದ ನಡೆಯುತ್ತಿದೆ .
ಬುಧವಾರ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿಯವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ ಮತ್ತು ಸುರೇಶ್ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.

