• Home  
  • ಉಡುಪಿ: ಸ್ಥಗಿತಗೊಳಿಸಲಾದ ನರ್ಮ್‌ ಬಸ್ಸುಗಳ ಚಾಲನೆಗೆ ಒತ್ತಾಯಿಸಿ ನಗರ ಬಿಜೆಪಿ ಯುವಮೋರ್ಚಾ ಜಿಲ್ಲಾಧಿಕಾರಿಯವರಿಗೆ ಮನವಿ (Udupi: Urban BJP Yuva Morcha appeals to the District Magistrate demanding the operation of suspended NRM buses)
- PROBLEMS - ರಾಜಕೀಯ

ಉಡುಪಿ: ಸ್ಥಗಿತಗೊಳಿಸಲಾದ ನರ್ಮ್‌ ಬಸ್ಸುಗಳ ಚಾಲನೆಗೆ ಒತ್ತಾಯಿಸಿ ನಗರ ಬಿಜೆಪಿ ಯುವಮೋರ್ಚಾ ಜಿಲ್ಲಾಧಿಕಾರಿಯವರಿಗೆ ಮನವಿ (Udupi: Urban BJP Yuva Morcha appeals to the District Magistrate demanding the operation of suspended NRM buses)

Share: ಉಡುಪಿ: ಸ್ಥಗಿತಗೊಳಿಸಲಾದ ನರ್ಮ್‌ ಬಸ್ಸುಗಳ ಚಾಲನೆಗೆ ಒತ್ತಾಯಿಸಿ ನಗರ ಬಿಜೆಪಿ ಯುವಮೋರ್ಚಾ ಜಿಲ್ಲಾಧಿಕಾರಿಯವರಿಗೆ ಮನವಿ (Udupi) ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಸ್ಥಗಿತಗೊಳಿಸಲಾಗಿರುವ  13 ರೂಟ್ ಗಳ  ಬಸ್ಸುಗಳ ಓಡಾಟವನ್ನು ಪುನರಾರಂಭಿಸಬೇಕೆಂದು ಉಡುಪಿ ನಗರ ಬಿಜೆಪಿ ಯುವಮೋರ್ಚಾ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರಿಗೆ ಮನವಿ ಸಲ್ಲಿಸಿದೆ. ನರ್ಮ್‌ ಬಸ್ಸುಗಳ  ಓಡಾಟದಿಂದ ಸಾರ್ವನಿಕರ […]

(Udupi) ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಸ್ಥಗಿತಗೊಳಿಸಲಾಗಿರುವ  13 ರೂಟ್ ಗಳ  ಬಸ್ಸುಗಳ ಓಡಾಟವನ್ನು ಪುನರಾರಂಭಿಸಬೇಕೆಂದು ಉಡುಪಿ ನಗರ ಬಿಜೆಪಿ ಯುವಮೋರ್ಚಾ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರಿಗೆ ಮನವಿ ಸಲ್ಲಿಸಿದೆ.

ನರ್ಮ್‌ ಬಸ್ಸುಗಳ  ಓಡಾಟದಿಂದ ಸಾರ್ವನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಸ್ಥಗಿತಗೊಳಿಸಲಾಗಿರುವ  13 ರೂಟ್ ಗಳ  ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿದೆ. ಅಲ್ಲದೆ ಸದ್ರಿ 45 ಬಸ್ಸು ಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಆಗಿದೆ. ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ ಪ್ರಯಾಣಿಕರ ಓಡಾಟದ ಸಂಖ್ಯೆಗೆ ಅನುಗುಣವಾಗಿ ಸದ್ರಿ ಬಸ್ಸುಗಳ ಸಂಖ್ಯೆಯನ್ನು ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕೆಂದು ಆಗ್ರಹಿಸಲಾಗಿದೆ.

  ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯದಾಗಿದ್ದು, ಮಾರ್ಗ ಮಧ್ಯೆ ಕೆಟ್ಟು ನಿಲ್ಲುವ ಘಟನೆಗಳು ಸಂಭವಿಸುತ್ತಿದೆ.

ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆ ಇದ್ದು, ಹುದ್ದೆ ಭರ್ತಿ ಮಾಡಬೇಕಾದ ಅನಿವಾರ್ಯತೆ ಇದೆ. ಸಮರ್ಪಕವಾದ ಬಸ್ ಸಂಚಾರ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು, ಸಾರ್ವಜನಿಕರು, ಕಾರ್ಮಿಕರು, ವಯೋವೃದ್ಧರು ಕಾಲ್ನಡಿಗೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಉಡುಪಿ ನಗರ ಬಿಜೆಪಿ ಯುವಮೋರ್ಚಾ ಜಿಲ್ಲಾಧಿಕಾರಿಗಳಿಗೆ ಈ ಎಲ್ಲಾ ಸಮಸ್ಯೆಗಳನ್ನು ವಿವರಿಸಿ ಅತೀ ಶೀಘ್ರದಲ್ಲಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಆಗ್ರಹಿಸಿದ್ದು, ನರ್ಮ್ ಬಸ್ಸು ಗಳ ಸೇವೆಯನ್ನು ಹೆಚ್ಚಿಸಬೇಕೆಂದು ಮನವಿ ಸಲ್ಲಿಸಿದೆ.  ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ, ಉಪಾಧ್ಯಕ್ಷ  ಸಂದರ್ಶ ಆಚಾರ್ಯ, ಪ್ರಜ್ವಲ್ ಪೂಜಾರಿ, ಧನುಷ್ ಬಿಕೆ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಮಣಿಪಾಲ, ಶಿವಪ್ರಸಾದ್, ಧನುಷ್ ಕಡಿಯಾಳಿ, ಹರ್ಷರಾಜ್, ಆಕಾಂಶ್, ಭೂಷಣ್, ದೀಕ್ಷಿತ್ ಶೆಟ್ಟಿ, ರಮಿತ್ ಶೆಟ್ಟಿ, ತರುಣ್ ಉಪಸ್ಥಿತರಿದ್ದರು

Leave a comment

Your email address will not be published. Required fields are marked *

eMedia Kannada  @2025. All Rights Reserved.