# Tags
#ನಿಧನ

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi : Tribute meeting for veteran journalist jayakara Suvarna)

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ

(Udupi) ಉಡುಪಿ, ಆ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.

 ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜಯಕರ ಸುವರ್ನರವರು ಪ್ರಾಮಾಣಿಕ ಪತ್ರಕರ್ತ. ಯಾವುದೇ ಅಹಂ ಇಲ್ಲದೆ ಸ್ನೇಹಜೀವಿಯಾಗಿದ್ದರು.  ಅತ್ಯಂತ ವಿನಯ ಶೀಲ ವ್ಯಕ್ತಿತ್ವದ, ನಗುಮುಖದ ಪ್ರಾಮಾಣಿಕ ಪತ್ರಕರ್ತರಾಗಿದ್ದ ಇವರು, ಇನ್ನೊಬ್ಬರನ್ನು ನೋಯಿಸುತ್ತಿರಲಿಲ್ಲ. ಜೀವನದಲ್ಲಿ ಯಾರಿಗೂ ತೊಂದರೆ ಕೊಡದೆ ಬದುಕಿದ ಇವರು, ಸುಖ ಮರಣವನ್ನು ಪಡೆದಿದ್ದಾರೆ ಎಂದರು.

 ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಪನ್ಯಾಸಕಿ ಡಾ.ನಿಕೇತನಾ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಕರ್ತರಾದ ಮೋಹನ್‌ಚಂದ್ರ ನಂಬಿಯಾರ್, ಶಶಿಧರ್ ಮಾಸ್ತಿಬೈಲು, ರಹೀಂ ಉಜಿರೆ, ಉದಯ್ ಪಡಿಯಾರ್, ಅಸ್ಟ್ರೋ ಮೋಹನ್, ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಉಡುಪಿ ವಲಯ ಗೌರವಾಧ್ಯಕ್ಷ ನವೀನ್ ಬಲ್ಲಾಳ್ ನುಡಿನಮನ ಸಲ್ಲಿಸಿದರು.

 ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಎಸ್‌ಕೆಪಿಎ ಉಡುಪಿ ವಲಯ ಅಧ್ಯಕ್ಷ ಸುಧೀರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ್ ಹಿರಿಯಡ್ಕ ಹಾಗೂ ಜಯಕರ ಸುವರ್ಣರ ಕುಟುಂಬಸ್ಥರು ಉಪಸ್ಥಿತರಿದ್ದರು.

ಪತ್ರಕರ್ತ ನಾಗರಾಜ್ ವರ್ಕಾಡಿ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2