ಉಡುಪಿ : ಹೆದ್ದಾರಿಗೆ ಉರುಳಿಬಿದ್ದ ಬೃಹತ್ ಟ್ಯಾಂಕ್ – ಸಂಚಾರ ಅಸ್ತವ್ಯಸ್ತ
(Udupi) ಉಡುಪಿ: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್ಕಿನಿಂದ ಟ್ಯಾಂಕೊಂದು ರಸ್ತೆಗೆ ಉರುಳಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಉಡುಪಿ ಕಿನ್ನಿಮೂಲ್ಕಿ ಜಂಕ್ಷನ್ ಸಮೀಪ ಈ ಘಟನೆ ಸಂಭವಿಸಿದೆ.
ಹೆದ್ದಾರಿ ಮದ್ಯದಲ್ಲಿ ಹಾಕಿರುವ ರಸ್ತೆ ಸೂಚನಾ ಫಲಕ ಅಡ್ಡ ಬಂದ ಕಾರಣ ಟ್ರಕ್ ಗೆ ಮುಂದೆ ಸಾಗಲು ಸಾಧ್ಯವಾಗಿರಲಿಲ್ಲ. ಎರಡು ದಿನಗಳ ಕಾಲ ಅಲ್ಲೇ ನಿಲ್ಲಿಸಿದ್ದ ಚಾಲಕ, ಟ್ರಕ್ ಅನ್ನು ರಿವರ್ಸ್ ತೆಗೆದು ಬೇರೆ ರೂಟ್ ನಲ್ಲಿ ಹೋಗಲು ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭ ಭಾರಿ ಗಾತ್ರದ ಟ್ಯಾಂಕ್ ರಸ್ತೆಗೆ ಉರುಳಿದೆ.
ಉಡುಪಿ ಟ್ರಾಫಿಕ್ ಪೊಲೀಸರು ಟ್ರಕ್ ಚಾಲಕನಿಗೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.

