ಉದ್ಯಮಿ ಆತ್ಮಹತ್ಯೆಗೆ ಹನಿಟ್ರ್ಯಾಪ್ ಸಾಧ್ಯತೆ: 6 ಮಂದಿ ವಿರುದ್ಧ ಕೇಸು (Possible honeytrap businessman’s suicide : Case against 6 people)
ಉದ್ಯಮಿ ಆತ್ಮಹತ್ಯೆಗೆ ಹನಿಟ್ರ್ಯಾಪ್ ಸಾಧ್ಯತೆ: 6 ಮಂದಿ ವಿರುದ್ಧ ಕೇಸು
(Mangaluru) ಮಂಗಳೂರು : ಉದ್ಯಮಿ, ಶೈಕ್ಷಣಿಕ ಮುಂದಾಳು ಬಿ. ಎಂ. ಮುಮ್ರಾಜ್ (52) ಅವರ ಮೃತದೇಹ ಕೂಳೂರು ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಈ ಮೂಲಕ ಉದ್ಯಮಿ ಆತ್ಮಹತ್ಯೆಗೆ ವ್ಯವಸ್ಥಿತ ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್ ಕಾರಣವೆನ್ನುವುದು ತಿಳಿದು ಬಂದಿದೆ.
ಮೇಲ್ನೋಟಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್, ಶೋಯೆಬ್, ಕಾಟಿಪಳ್ಳ ಬೊಳ್ಳಾಜೆಯ ಅಬ್ದುಲ್ ಸತ್ತಾರ್, ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಖಲಂದರ್ ಶಾಫಿ, ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಸಿರಾಜ್ ಅಲಾಂ ಸೇರಿದಂತೆ 6 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮಾಜಿ ಶಾಸಕ ಮೊಯ್ದಿನ್ ಬಾವ ಹಾಗೂ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಉಪಾಧ್ಯಕ್ಷ ಬಿ.ಎಂ. ಫಾರೂಕ್ ಅವರ ಸಹೋದರನಾಗಿರುವ ಮುಮ್ರಾಜ್ ಅಲಿ ಬಿ. ಎಂ. ಮಂಗಳೂರಿನ ಕದ್ರಿಯ ಅಲ್ವಾರಿಸ್ ರಸ್ತೆಯ ಅಪಾರ್ಟ್ ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾನುವಾರ ಮುಂಜಾನೆ ಯಿಂದ ನಾಪತ್ತೆಯಾಗಿದ್ದರು. ಅವರ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆ ಬಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾತ್ರಿಯವರೆಗೂ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಕೊನೆಗೂ ಸೋಮವಾರ ಬೆಳಗ್ಗೆ 10.30ರ ವೇಳೆಗೆ ಉದ್ಯಮಿಯ ಮೃತದೇಹ ಕೂ ಳೂರು ಸೇತುವೆಯ ಪಕ್ಕದಲ್ಲೇ ಪತ್ತೆಯಾಗಿದೆ.