ಉದ್ಯಾವರ; ಕಾರು ಪಲ್ಟಿ, ಕಾರಿನಲ್ಲಿದ್ದವರಿಗೆ ಗಾಯ
(Udyavara) ಉದ್ಯಾವರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉದ್ಯಾವರ ರಾ.ಹೆ. 66ರ ಸೇತುವೆ ಬಳಿ ಮಗುಚಿ ಬಿದ್ದು ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಸೋಮವಾರ ಮದ್ಯಾಹ್ನ ಘಟಿಸಿದೆ.
ಉಡುಪಿಯತ್ತ ತೆರಳುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಇಬ್ಬರೂ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿಸು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಯತ್ತ ಕರೆದೊಯ್ಯಲಾಗಿದೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಿಂದ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸ್ಥಳೀಯರ ಸಹಕಾರದಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲಾಯಿತು.

