ಉದ್ಯಾವರ, ಕುರ್ಕಾಲು, ಶಿರ್ವ ವ್ಯಾಪ್ತಿಯಲ್ಲಿ 7.5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಗುದ್ದಲಿ ಪೂಜೆ ನೆರವೇರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
(Kaup) ಕಾಪು : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉದ್ಯಾವರ – ಕುರ್ಕಾಲು – ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗೆ 2.5 ಕೋಟಿ ರೂಪಾಯಿಯಂತೆ ಒಟ್ಟು 7.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶನಿವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಂಗ್ರೆಸ್ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ನವೀನ್ ಚಂದ್ರ ಸುವರ್ಣ, ಪ್ರಶಾಂತ್ ಜತ್ತನ್ನ, ವೈ ಸುಕುಮಾರ್, ನಿಯಾಝ್, ಉದ್ಯಾವರ, ಕುರ್ಕಾಲು, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.

