# Tags
#ನಿಧನ

ಉದ್ಯಾವರ: ಕೇವಲಾ ಒಂದು ದಿನದ ಅಂತರದಲ್ಲಿ ಸಾವಿನಲ್ಲೂ ಒಂದಾದ ಪತಿ-ಪತ್ನಿ (A Husband and Wife united even in death)

ಉದ್ಯಾವರ: ಕೇವಲಾ ಒಂದು ದಿನದ ಅಂತರದಲ್ಲಿ ಸಾವಿನಲ್ಲೂ ಒಂದಾದ ಪತಿ-ಪತ್ನಿ

(Uduavara) ಉದ್ಯಾವರ: ಜೀವನ ಪರ್ಯಂತ ಒಟ್ಟೊಟ್ಟಿಗೆ ಇರುತ್ತೇವೆ ಚರ್ಚ್‌ನಲ್ಲಿ ದಂಪತಿಗಳಾದ ಸತಿ, ಪತಿ ಕೇವಲಾ ಒಂದು ದಿನದ ಅಂತರದಲ್ಲಿ ತಮ್ಮ ಮರಣದಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಘಟಿಸಿದೆ.

  ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ. 27ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ .ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸ (62)ಅವರು ಅಸೌಖ್ಯದಿಂದ ನ.೨೯ರಂದು ನಿಧನ ಹೊಂದಿದರು. ಇವರಿಬ್ಬರು ಒಂದು ದಿನದ ಅಂತರದಲ್ಲಿ ಸಾವಿನಲ್ಲೂ ಜೊತೆಗೂಡಿದ್ದಾರೆ.

ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಲಾರೆನ್ಸ್ ಡೇಸ ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪಾಲನ ಮಂಡಳಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ, ವಾರ್ಡಿನ ಗುರಿಕಾರರಾಗಿದ್ದ ಮೃತರು, ಉದ್ಯಾವರ ಬೋಳಾರಗುಡ್ಡೆ ಕಲಾಯಿಬೈಲ್ ನಿವಾಸಿ. ಉದ್ಯಾವರ ಮಂಡಲ ಪಂಚಾಯತ್ ಸದಸ್ಯರಾಗಿ, ಒಂದು ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷರಾಗಿ ಸುದೀರ್ಘ ಸುಮಾರು ಮೂರು ದಶಕಗಳ ಕಾಲ ಗ್ರಾ. ಪಂ. ಸದಸ್ಯರಾಗಿ ಸಮಾಜಮುಖಿ ಸೇವೆಯನ್ನು ಸಲ್ಲಿಸಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 ಉದ್ಯಾವರ ಕೆಥೋಲಿಕ್ ಸಭಾ, ಲಯನ್ಸ್ ಕ್ಲಬ್, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷ ಹಾಗೂ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಕ್ರೀಡೆ, ಕೃಷಿಯಲ್ಲಿ ಗುರುತರ ಸಾಧಕರಾಗಿದ್ದರು.

ಗಣ್ಯರ ಸಂತಾಪ:

 ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ (ಉ) ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಮುಖಂಡ ಉದ್ಯಾವರ ನಾಗೇಶ್ ಕುಮಾರ್, ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಧರ್ಮಗುರು ವಂ. ಅನಿಲ್ ಡಿಸೋಜ, ಸಹಾಯಕ ಧರ್ಮಗುರು ವಂ. ಸ್ಟೀಫನ್ ರಾಡ್ರಿಗಸ್, ಉಡುಪಿ ನಗರ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಉದ್ಯಾವರ, ಭೂನ್ಯಾಯ ಮಂಡಳಿ ಸದಸ್ಯ ರೋಯ್ಸ್ ಉದ್ಯಾವರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2