• Home  
  • ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara ; Inauguration of the new building of Sri Dharmasthala Manjunatheshwara Ayurveda College Hospital and Research Centre)
- ಶಾಲಾ ಕಾಲೇಜು

ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara ; Inauguration of the new building of Sri Dharmasthala Manjunatheshwara Ayurveda College Hospital and Research Centre)

Share: ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara) ಉದ್ಯಾವರ: ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿತು. ಕಟ್ಟಡವನ್ನು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದರು ಉದ್ಘಾಟಿಸಿದರು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿದರು. ಬಳಿಕ ಆಶೀರ್ವಚನ ನೀಡಿದ ಪೇಜಾವರ ಶ್ರೀಗಳು, ಶೈಕ್ಷಣಿಕ, ಆರೋಗ್ಯ […]

ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ

(Udyavara) ಉದ್ಯಾವರ: ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿತು.

ಕಟ್ಟಡವನ್ನು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದರು ಉದ್ಘಾಟಿಸಿದರು.

ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿದರು.

ಬಳಿಕ ಆಶೀರ್ವಚನ ನೀಡಿದ ಪೇಜಾವರ ಶ್ರೀಗಳು, ಶೈಕ್ಷಣಿಕ, ಆರೋಗ್ಯ ಮತ್ತಿತರ ಕ್ಷೇತ್ರಗಳಲ್ಲಿ ಧರ್ಮಸ್ಥಳ ಸಂಸ್ಥೆಯು ದೇಶಕ್ಕೆ ಅನನ್ಯ ಕೊಡುಗೆಯನ್ನು ನೀಡುತ್ತಿದೆ. ಈ ಸೇವೆಯು ಹೀಗೇ ಮುಂದುವರೆಯಲಿ ಎಂದು ಶುಭಹಾರೈಸಿದರು.

 ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೆಂದ್ರ ಹೆಗ್ಗಡೆ ವಹಿಸಿದ್ದರು.

ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜು ರಾಷ್ಟ್ರೀಯ ಭಾರತೀಯ ವೈದ್ಯಕೀಯ ವ್ಯವಸ್ಥೆ ಆಯೋಗ ದಿಂದ ಶ್ರೇಣೀಕರಣದಲ್ಲಿ ಅಖಿಲ ಭಾರತ ಮಟ್ಟದಲ್ಲಿ 2ನೇ ಹಾಗೂ ರಾಜ್ಯದಲ್ಲಿ 1ನೇ ಸ್ಥಾನ ಮತ್ತು ದೇಶಾದ್ಯಂತ ಖಾಸಗಿ ಸಂಸ್ಥೆಗಳಲ್ಲಿ 1ನೇ ಸ್ಥಾನ ಪಡೆದಿದೆ. ಪ್ರಸ್ತುತ ವರ್ಷ ಎಸ್‌ಡಿಎಂ ಆಯುರ್ವೇದ ಕಾಲೇಜು ತನ್ನ ಸ್ನಾತಕೋತ್ತರ ಅಧ್ಯಯನ ಕಾರ್ಯಕ್ರಮದ 25 ವರ್ಷಗಳನ್ನು ಪೂರೈಸುತ್ತಿದೆ. ಕಾಲೇಜು ಆಯುರ್ವೇದ ವನವನ್ನು ಹೊಂದಿದ್ದು, ಈ ಬಾರಿ ವಿವಿಧ ಗಿಡಮೂಲಿಕೆಗಳ 1 ಸಾವಿರ ಗಿಡ ಬೆಳೆಸಿ ಔಷಧ ವನ ವಿಸ್ತರಿಸಲಾಗುತ್ತಿದೆ.

 1958ರಲ್ಲಿ ಸಮಾನ ಮನಸ್ಕರಿಂದ ಆಯುರ್ವೇದ ಸಂಶೋಧನಾ ಕೇಂದ್ರ ಸ್ಥಾಪನೆಗೊಂಡಿತ್ತು. ಕಾಲೇಜು 21 ಎಕರೆ ವಿಸ್ತೀರ್ಣ ಹೊಂದಿದ್ದು, ಹಳೆ ಕಟ್ಟಡವಿದ್ದ ಜಾಗದಲ್ಲೇ ಸುಸಜ್ಜಿತ ನೂತನ ಕಟ್ಟಡವು ಸುಮಾರು 25 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

 ನೂತನ ಕಾಲೇಜು ಕಟ್ಟಡದಲ್ಲಿ 7 ತರಗತಿ ಕೊಠಡಿ, ಪ್ರತಿ ವಿಭಾಗಕ್ಕೂ ಲ್ಯಾಬ್, ಕೌಶಲ ಲ್ಯಾಬ್, 9 ಪಿ.ಜಿ. ವಿಭಾಗ, ಮ್ಯೂಸಿಯಂ, ಲ್ಯಾಬೊ ರೇಟರಿ ಸಹಿತ ಆಧುನಿಕ ಉಪಕರಣಗಳನ್ನು ಹೊಂದಿದೆ.

 ಸಭಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಆಯುರ್ವೇದ ಮಂಡಳಿ ಅಧ್ಯಕ್ಷ ಡಾ. ಶ್ರೀನಿವಾಸ ಪ್ರಸಾದ್‌ ಬುದೂರು, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಡಾ. ಧನಂಜಯ ಸರ್ಜಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.