ಉಳ್ಳಾಲ: ಸಮುದ್ರದ ವಿಹಾರಕ್ಕೆ ಎಂದು ಬಂದಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವನ್ನು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಪ್ರಕರಣವು ಸೋಮೇಶ್ವರ ಸಮುದ್ರ ತೀರದಲ್ಲಿ ಸಂಭವಿಸಿದೆ .
ಗುರುವಾರ ಸಂಜೆ ಮೂವರು ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿ ವಿಹರಿಸುತ್ತಿದ್ದರು ತಿಳಿದು ಬಂದಿದೆ.
ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ಬಂದಿದ್ದ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು.
ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ಈ ತಂಡ ಯುವಕರ ಮೇಲೆ ಹಲ್ಲೆ ನಡೆಸಿದೆ ಕೇರಳ ಚೇರ್ಕಳದ ಜಾಫರ್, ಮಂಜೇಶ್ವರದ ಮುಜಿಬತ್ತು ಮತ್ತು ಆಶಿಕ್ ಹಲ್ಲೆಗೆ ಒಳಗದವರು.
ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ,

