• Home  
  • ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ​: ಹೆಚ್ ಡುಂಡಿರಾಜ್ (He who is not a sage and does not have happiness cannot become a poet : H Dundiraj)
- ಸಂಘ, ಸಂಸ್ಥೆಗಳು

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ​: ಹೆಚ್ ಡುಂಡಿರಾಜ್ (He who is not a sage and does not have happiness cannot become a poet : H Dundiraj)

Share: ​ ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​ : ಹೆಚ್ ಡುಂಡಿರಾಜ್ (Udupi) ಉಡುಪಿ: ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು, ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ, ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.  ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ […]

(Udupi) ಉಡುಪಿ: ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು, ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ, ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.

 ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

 ಸಹಜವಾಗಿ ಬರೆದರೆ ಅದು ಕಾವ್ಯ ಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ , ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ​ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ​. ಕವಿತೆ ತಪಸ್ಸು, ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ಎಂದು ಹೇಳಿದರು.

ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ​ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು.

ಲಹರಿ ಪ್ರಾರ್ಥಿಸಿದರು. ಶಿಲ್ಪಾ ಜೋಶಿ ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ​ಕಸಾಪ  ಘಟಕ ಅಧ್ಯಕ್ಷ ರವಿರಾಜ​ ಎಚ್. ಪಿ. ಪ್ರಾಸ್ತಾವಿಕ ಮಾತನಾಡಿದರು. ಜನಾರ್ದನ ಕೊಡವೂರು ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.