ಎಂಐಟಿ 2023 ಹೊಸ ಶೈಕ್ಷಣಿಕ ವರ್ಷ ಆರಂಭ – ಶ್ರೀಮತಿ ವಿದ್ಯಾ ಕುಮಾರಿ, ಉಡುಪಿ ಜಿಲ್ಲಾಧಿಕಾರಿಯವರಿಂದ ಉದ್ಘಾಟನೆ.
ಎಂಐಟಿ 2023 ಹೊಸ ಶೈಕ್ಷಣಿಕ ವರ್ಷ ಆರಂಭ – ಶ್ರೀಮತಿ ವಿದ್ಯಾ ಕುಮಾರಿ, ಉಡುಪಿ ಜಿಲ್ಲಾಧಿಕಾರಿಯವರಿಂದ ಉದ್ಘಾಟನೆ.
ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು 17 ಜುಲೈ 2023 ರಂದು ಉದ್ಘಾಟಿಸಲಾಯಿತು.
ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ವಿದ್ಯಾ ಕುಮಾರಿಯವರು ಸಮಾರಂಭವನ್ನು ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಸಂಸ್ಥೆ ನೀಡುವ ಅದ್ಭುತ ಕೊಡುಗೆಗಾಗಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಗೆ ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾದಿಕಾರಿ ಹೇಳಿದ್ದಾರೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಫಲಪ್ರದವಾಗಲಿ ಎಂದು ಆಶೀರ್ವದಿಸಿದರು.
ಕಾರ್ಯಕ್ರಮದಲ್ಲಿ ಮಾಹೆ ರಿಜಿಸ್ಟ್ರಾರ್ ಡಾ. ಗಿರಿಧರ್ ಕಿಣಿ, ಎಂಐಟಿ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ, ಎಂಐಟಿ ಜಂಟಿ ನಿರ್ದೇಶಕ ಡಾ. ಸೋಮಶೇಖರ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಸಹ ನಿರ್ದೇಶಕಿ ಡಾ.ಪೂರ್ಣಿಮಾ ಕುಂದಾಪುರ ಉಪಸ್ಥಿತರಿದ್ದರು.